ನ್ಯೂಸ್ ನಾಟೌಟ್: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಶಿರಾಡಿ ಹಾಗೂ ಮಡಿಕೇರಿ ಘಾಟಿಯಲ್ಲಿ ಭೂಕುಸಿತ ಸಂಭವಿಸಿದ್ದರಿಂದ ರಸ್ತೆ ಸಂಚಾರವನ್ನು ನಿರ್ಬಂಧಿಸಲಾಗಿದೆ. ಇದೀಗ ಆಗುಂಬೆ ಘಾಟಿಯಲ್ಲೂ ರಸ್ತೆಗಳು ಬಿರುಕು ಬಿಟ್ಟಿದ್ದು ಕುಸಿಯುವ ಆತಂಕ ಎದುರಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ಆಗುಂಬೆ ಪರ್ವತ ಪ್ರದೇಶ ಆಗಿರುವುದರಿಂದ ಭೂಕುಸಿತ ಸಂಭವಿಸಿದರೆ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಲಿದ್ದು ವಾಹನ ಸವಾರರು ಪರದಾಡಬೇಕಾದ ಸ್ಥಿತಿ ಎದುರಾಗುವ ಆತಂಕವಿದೆ.