ಕರಾವಳಿಬೆಂಗಳೂರುರಾಜಕೀಯ

ತತ್ವ, ಸಿದ್ಧಾಂತ ಒಪ್ಪಿ ಬರುವವರಿಗೆ ಪಕ್ಷದಲ್ಲಿ ಅವಕಾಶ

230

ನ್ಯೂಸ್‌ ನಾಟೌಟ್‌: ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಬರುವವರನ್ನು ನಾವು ಸ್ವಾಗತಿಸುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಗರದ ಮೇರಿಹಿಲ್ ಹೆಲಿಪ್ಯಾಡ್ ನಲ್ಲಿ ಶಾಸಕ ಯು.ಟಿ.ಖಾದರ್, ವಿ.ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಮಂಜುನಾಥ ಭಂಡಾರಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಸ್ವಾಗತಿಸಿದರು.

ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಶೆಟ್ಟರ್ ಅವರದ್ದು ಬಿಜೆಪಿ ರಕ್ತ, ಅವರು ಬಿಜೆಪಿಗೆ ವಾಪಾಸಾಗಲಿದ್ದಾರೆ’ ಎಂಬ ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿ, ರಕ್ತ ಪರೀಕ್ಷೆ ಮಾಡಿ ನಾವು ಪಕ್ಷಕ್ಕೆ ಸೇರಿಸಿಕೊಂಡಿಲ್ಲ. ಪಕ್ಷದ ತತ್ವ, ನೀತಿ ಒಪ್ಪಿಕೊಂಡು ಬರುವವರಿಗೆ ಸ್ವಾಗತ ಇದೆ ಎಂದರು.

See also  ಕೊಡಗಿನ ವ್ಯಕ್ತಿಯಿಂದ ಸಕಲೇಶಪುರದಲ್ಲಿ ವಿಷ ಸೇವನೆ, ಗಂಭೀರ ಸ್ಥಿತಿಯಲ್ಲಿರುವ ವ್ಯಕ್ತಿಯ ಮನೆಯವರಿಗಾಗಿ ಮನವಿ
  Ad Widget   Ad Widget   Ad Widget   Ad Widget   Ad Widget   Ad Widget   Ad Widget