Latestಕ್ರೈಂದೇಶ-ವಿದೇಶವೈರಲ್ ನ್ಯೂಸ್

ಏರ್ ಇಂಡಿಯಾ ವಿಮಾನ ದುರಂತದ 215 ಮಂದಿಯ ಡಿಎನ್‌ ಎ ಮ್ಯಾಚ್‌, 198 ಮೃತದೇಹ ಹಸ್ತಾಂತರ

446

ನ್ಯೂಸ್ ನಾಟೌಟ್: ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ಪೈಕಿ ಈವರೆಗೆ ಒಟ್ಟು 215 ಮಂದಿ ಗುರುತು ಪತ್ತೆಯಾಗಿದ್ದು, 198 ಮೃತ ದೇಹಗಳನ್ನ ಸಂಬಂಧಪಟ್ಟ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಅಹಮದಾಬಾದ್ ಸಿವಿಲ್ ಹಾಸ್ಪಿಟಲ್ ಅಧೀಕ್ಷಕ ರಾಕೇಶ್ ಜೋಶಿ ತಿಳಿಸಿದ್ದಾರೆ.

ಒಟ್ಟು 215 ಡಿಎನ್‌ಎ (DNA) ವರದಿಗಳು ಮ್ಯಾಚ್‌ ಆಗಿವೆ. ಈ ಪೈಕಿ 198 ಮೃತದೇಹಗಳನ್ನ ಹಸ್ತಾಂತರಿಸಲಾಗಿದೆ. ಈ ಪೈಕಿ 149 ಭಾರತೀಯರು, 7 ಪೋರ್ಚುಗೀಸ್‌, 32 ಬ್ರಿಟಿಷ್‌ ಮತ್ತಿ ಕೆನಡಿಯನ್‌ ಪ್ರಜೆಗಳ ಮೃತದೇಹಗಳು ಪತ್ತೆಯಾಗಿವೆ ಎಂದು ಮಾಹಿತಿ ಲಭಿಸಿದೆ.

15 ಮೃತದೇಹಗಳನ್ನು ಏರ್‌ ಅಂಬುಲೆನ್ಸ್‌ ಹಾಗೂ 183 ಮೃತದೇಹಗಳನ್ನು ರೋಡ್‌ ಅಂಬುಲೆನ್ಸ್‌ ಮೂಲಕ ಸಾಗಿಸಲಾಗಿದೆ. ಇದೆಲ್ಲವೂ ಸೇರಿ ಒಟ್ಟಾರೆ 222 ಮೃತದೇಹಗಳನ್ನು ಪತ್ತೆ ಹಚ್ಚಲಾಗಿದೆ. 8 ಮಂದಿ ಮೃತದೇಹಗಳ ಗುರುತು ಮಾತ್ರ ಪತ್ತೆಯಾಗಿಲ್ಲ ಎಂದು ವಿವರಿಸಿದ್ದಾರೆ.

ಸದ್ಯ ಪತನವಾಗಿರುವ ಏರ್‌ ಇಂಡಿಯಾ ಬೋಯಿಂಗ್-787 ವಿಮಾನದ ಬ್ಲ್ಯಾಕ್‌ ಬಾಕ್ಸ್‌ ಅನ್ನು ಡಿಕೋಡ್‌ ಮಾಡಲು ಅಮೆರಿಕಕ್ಕೆ ಕಳುಹಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಆ್ಯಪಲ್, ಫೇಸ್‌ಬುಕ್, ಗೂಗಲ್ ನ 16 ಶತಕೋಟಿ ಪಾಸ್‌ ವರ್ಡ್ ಗಳ ಸೋರಿಕೆ..! ಸಂದೇಶಗಳಲ್ಲಿ ಬಂದ ಅಪರಿಚಿತ ಲಿಂಕ್ ಗಳನ್ನು ಕ್ಲಿಕ್ ಮಾಡದಂತೆ ಫೇಸ್ ಬುಕ್ ವಾರ್ನಿಂಗ್..!

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್​ ಬೆನ್ನಲ್ಲೇ ಸರ್ಕಾರದಿಂದ ಹೊಸ ನಿಯಮ ಜಾರಿ..! ಕಾರ್ಯಕ್ರಮ ಆಯೋಜಕರು ಕಾನೂನು ಮೀರಿದ್ರೆ 3 ವರ್ಷ ಜೈಲು..!

See also  ಗುದದ್ವಾರದೊಳಗೆ ಚಿನ್ನ ಬಚ್ಚಿಟ್ಟು ಸಾಗಾಟಕ್ಕೆ ಯತ್ನ
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget