ನ್ಯೂಸ್ ನಾಟೌಟ್: ಉತ್ತರ ಪ್ರದೇಶದ ಗಾಜಿಯಾಬಾದ್ ನ ಹಿಂಡನ್ ವಿಮಾನ ನಿಲ್ದಾಣದಿಂದ ಕೋಲ್ಕತ್ತಾಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಟೇಕಾಫ್ ಗೆ ಸ್ವಲ್ಪ ಸಮಯ ಬಾಕಿ ಇರುವಾಗ ತಾಂತ್ರಿಕ ದೋಷ ಕಾಣಿಸಿದ್ದು, ಅನಾಹುತವೊಂದು ತಪ್ಪಿದಂತಾಗಿದೆ.
ಏರ್ ಇಂಡಿಯಾ IX 1511 ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ರನ್ ವೇಯಲ್ಲಿದ್ದಾಗ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ, ವಿಮಾನ ಹಾರಾಟ ಒಂದು ಗಂಟೆ ಕಾಲ ವಿಳಂಬವಾಯಿತು. ಇದರಿಂದ ಪ್ರಯಾಣಿಕರಿಗೆ ಉಂಟಾದ ಅನಾನುಕೂಲಕ್ಕೆ ಏರ್ ಇಂಡಿಯಾ ಕ್ಷಮೆಯಾಚಿಸಿದೆ.
ವಿಮಾನದಲ್ಲಿನ ತಾಂತ್ರಿಕ ದೋಷದಿಂದಾಗಿ ಹಾರಾಟ ವಿಳಂಬವಾಗಿದೆ. ಪ್ರಯಾಣಿಕರಿಗೆ ಉಚಿತ ಟಿಕೆಟ್ ಮರುಹೊಂದಿಕೆ ಅಥವಾ ರದ್ದತಿಯನ್ನು ಪೂರ್ಣ ಮರುಪಾವತಿಯೊಂದಿಗೆ ಮಾಡಿಕೊಡಲಾಗಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ ಎಂದು ಏರ್ ಇಡಿಯಾ ವಕ್ತಾರರು ತಿಳಿಸಿದ್ದಾರೆ.
ವಿಮಾನವು ರನ್ ವೇಗೆ ಬಂದು ನಿರ್ಗಮನಕ್ಕೆ ಸಿದ್ಧತೆ ನಡೆಸುತ್ತಿದ್ದಾಗ ಸಿಬ್ಬಂದಿಗೆ ಕೊನೆಯ ಕ್ಷಣದಲ್ಲಿ ತೊಂದರೆ ಕಂಡುಬಂದಿದೆ. ಕೂಡಲೇ ಇಂಜಿನಿಯರ್ ಗಳನ್ನು ಕರೆಸಿ ಪರಿಶೀಲಿಸಲಾಯಿತು ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.
ಬೆಳ್ತಂಗಡಿ:ವೇಶ್ಯಾವಾಟಿಕೆ ಶಂಕೆ ಮೇರೆಗೆ ಲಾಡ್ಜ್ ಗಳಿಗೆ ಪೊಲೀಸ್ ದಾಳಿ..! ಇಬ್ಬರು ಅರೆಸ್ಟ್..!