ನ್ಯೂಸ್ ನಾಟೌಟ್ : ಅಹಮದಾಬಾದ್ನಲ್ಲಿ ಸಂಭವಿಸಿದ ಏರ್ ಇಂಡಿಯಾ ಬೋಯಿಂಗ್ ಡ್ರೀಮ್ ಲೈನರ್ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ.
ಈ ಸಾವು-ನೋವುಗಳಲ್ಲಿ ವಿಮಾನದಲ್ಲಿದ್ದ ಪ್ರಯಾಣಿಕರು, ಪೈಲಟ್ ಹಾಗೂ ಸಿಬ್ಬಂದಿ, ವಿಮಾನ ಅಪಘಾತಕ್ಕೀಡಾದ ಸ್ಥಳದಲ್ಲಿದ್ದ ಜನರು ಸೇರಿದ್ದಾರೆ.
ಗುರುವಾರ ಅಹಮದಾಬಾದ್ನಿಂದ ಲಂಡನ್ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ಟೇಕಾಫ್ ಆದ ಕೆಲವೇ ಸೆಕೆಂಡುಗಳಲ್ಲಿ ಅಪಘಾತಕ್ಕೀಡಾದ ವಿಮಾನದಲ್ಲಿ 230 ಪ್ರಯಾಣಿಕರು, ಇಬ್ಬರು ಪೈಲಟ್ಗಳು ಮತ್ತು 10 ಸಿಬ್ಬಂದಿ ಸೇರಿದಂತೆ 242 ಜನರಿದ್ದರು. ಈ ಪೈಕಿ ಭಾರತೀಯ ಮೂಲದ ಬ್ರಿಟಿಷ್ ಪ್ರಜೆ ಮಾತ್ರ ಅಪಘಾತದಲ್ಲಿ ಬದುಕುಳಿದರು.
ದುರಂತಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ವಿಮಾನದಲ್ಲಿದ್ದ ಎರಡು ಬ್ಲ್ಯಾಕ್ ಬಾಕ್ಸ್ಗಳ ಪೈಕಿ ಒಂದು ಪತ್ತೆಯಾಗಿದೆ. ಅದನ್ನು ಅಧಿಕಾರಿಗಳ ತಂಡ ಕೊಂಡೊಯ್ದಿದೆ. ಮತ್ತೊಂದು ಬ್ಲ್ಯಾಕ್ ಬಾಕ್ಸ್ ಗಾಗಿ ಹುಡುಕಾಟ ನಡೆದಿದೆ.
ಅಪಘಾತ ಸಂಭವಿಸಿದ ಮಾರನೇ ದಿನ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದರು. ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
ಹಾಸ್ಟೆಲ್ ನಲ್ಲಿದ್ದವರಲ್ಲಿ ಕೆಲವರು ಇನ್ನೂ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.