ಕ್ರೈಂದೇಶ-ಪ್ರಪಂಚದೇಶ-ವಿದೇಶವೈರಲ್ ನ್ಯೂಸ್

ವಿಮಾನದಲ್ಲಿತ್ತು 10 ಜೀವಂತ ಅನಕೊಂಡಗಳು..! ಏನಿದು ಘಟನೆ..?

ನ್ಯೂಸ್ ನಾಟೌಟ್: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ(ಎ.೨೨) ತಮ್ಮ ಚೆಕ್-ಇನ್ ಬ್ಯಾಗೇಜ್‌ನಲ್ಲಿ ಹಳದಿ ಅನಕೊಂಡಗಳನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಆರೋಪದ ಮೇಲೆ ಪ್ರಯಾಣಿಕನೊಬ್ಬನನ್ನು ಬಂಧಿಸಿರುವುದಾಗಿ ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು, ‘ಬ್ಯಾಂಕಾಕ್‌ನಿಂದ ಆಗಮಿಸಿದ್ದ ಪ್ರಯಾಣಿಕರ ಚೆಕ್-ಇನ್ ಬ್ಯಾಗ್‌ನಲ್ಲಿ ಬಚ್ಚಿಟ್ಟಿದ್ದ 10 ಹಳದಿ ಅನಕೊಂಡಗಳನ್ನು ಕಳ್ಳಸಾಗಣೆಗಾಣಿಕೆ ಮಾಡುವ ಪ್ರಯತ್ನವನ್ನು ತಡೆದಿದ್ದೇವೆ ಎಂದು ತಿಳಿಸಿದ್ದಾರೆ. “ಪ್ರಯಾಣಿಕನನ್ನು ಬಂಧಿಸಿ ತನಿಖೆ ನಡೆಯುತ್ತಿದ್ದೇವೆ. ವನ್ಯಜೀವಿ ಕಳ್ಳಸಾಗಣೆಯನ್ನು ಸಹಿಸಲಾಗುವುದಿಲ್ಲ”ಎಂದು ಕಸ್ಟಮ್ಸ್ ಅಧಿಕಾರಿಗಳು ಹೇಳಿದ್ದಾರೆ. ಭಾರತೀಯ ಕಾನೂನುಗಳ ಪ್ರಕಾರ ವನ್ಯಜೀವಿ ವ್ಯಾಪಾರ ಮಾಡುವುದು ಕಾನೂನುಬಾಹಿರವಾಗಿದೆ ಮತ್ತು ಕಸ್ಟಮ್ಸ್ ಆಕ್ಟ್, 1962 ವನ್ಯಜೀವಿ ಕಳ್ಳಸಾಗಣೆಯನ್ನು ಎದುರಿಸಲು ಹಲವು ಕ್ರಮಗಳನ್ನು ಕೈಗೊಳ್ಳುತ್ತದೆ.

Related posts

ತಡರಾತ್ರಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಉಪಪ್ರಧಾನಿ ಎಲ್‌.ಕೆ ಅಡ್ವಾಣಿ, ವೈದ್ಯರು ಹೇಳಿದ್ದೇನು..?

ಕರ್ನಾಟಕ-ಆಂಧ್ರ ಬಸ್‌ ಗಳ ಓವರ್‌ ಟೆಕ್ ಭರದಲ್ಲಿ 8 ವರ್ಷದ ಬಾಲಕಿ ಸಾವು..! ಆಕೆಯ ಸೋದರ ಮಾವನೂ ದುರಂತ ಅಂತ್ಯ..!

ಏರ್‌ ಇಂಡಿಯಾ ವಿಮಾನ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ಯಾರು..? ಸ್ಪೋಟದ ದಿನಾಂಕವನ್ನೂ ಘೋಷಿಸಿದ್ರಾ ಉಗ್ರರು?