ಬೆಂಗಳೂರು: ಡಿಸೆಂಬರ್ 10ರಂದು ವಿಧಾನ ಪರಿಷತ್ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಡಿಸೆಂಬರ್ 8ರಿಂದ 3ದಿನಗಳ ಕಾಲ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಡಿಸೆಂಬರ್ 8, 9, 10ರಂದು ಮೂರು ದಿನಗಳ ಕಾಲ ವೈನ್ ಸ್ಟೋರ್ ಹಾಗೂ ಬಾರ್ ಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ ಎಂದು ತಿಳಿಸಲಾಗಿದೆ. ಇನ್ನೂ ಮೂರು ದಿನಗಳ ಕಾಲ ಬಾರ್ ಬಂದ್ ಗೆ ಮದ್ಯ ಪ್ರಿಯರು ಹಾಗೂ ಬಾರ್ ಮಾಲೀಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. 25 ವಿಧಾನ ಪರಿಷತ್ ಸ್ಥಾನಗಳಿಗೆ ಡಿಸೆಂಬರ್ 10ರಂದು ಮತದಾನ ನಡೆಯಲಿದೆ. ಡಿಸೆಂಬರ್ 14ರಂದು ಮತ ಎಣಿಕೆ ನಡೆಯಲಿದೆ. ಫಲಿತಾಂಶ ಪ್ರಕಟವಾಗಲಿದೆ. ಈಗಾಗಲೇ ಪ್ರಮುಖ ಮೂರು ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ.
previous post