ನ್ಯೂಸ್ ನಾಟೌಟ್: ನಟ ಅಲ್ಲು ಅರ್ಜುನ್ ಗೆ ಒಂದರ ಹಿಂದೊಂದು ಸಂಕಷ್ಟ ಎದುರಾಗುತ್ತಿದೆ. ಸಂಧ್ಯಾ ಚಿತ್ರಮಂದಿರದಲ್ಲಿ ‘ಪುಷ್ಪ 2’ ಪ್ರದರ್ಶನದ ವೇಳೆ ಕಾಲ್ತುಳಿತ ಉಂಟಾಗಿದ್ದರಿಂದ ಅಭಿಮಾನಿಯೊಬ್ಬರು ಮೃತರಾದ ಘಟನೆ ಇತ್ತೀಚೆಗೆ ನಡೆದಿತ್ತು. ಅದಕ್ಕೆ ಸಂಬಂಧಿಸಿದಂತೆ ಈಗ ಪ್ರತಿಭಟನೆ ಕೂಡ ನಡೆಯುತ್ತಿದೆ. ಅಲ್ಲು ಅರ್ಜುನ್ ಅವರ ಮನೆಯ ಎದುರು ಪ್ರತಿಭಟನೆ ಮಾಡಲಾಗಿದೆ. ಮೃತರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ಮಾಡಲಾಗಿದ್ದು, ಈ ವೇಳೆ ಅಲ್ಲು ಅರ್ಜುನ್ ಅವರ ಮನೆಯ ಮೇಲೆ ಕಲ್ಲು ತೂರಾಟ ಕೂಡ ನಡೆದಿದೆ.
ಇಂದು (ಡಿಸೆಂಬರ್ 22) ಓಯು ಜಎಸಿ ಸಂಘಟನೆಯ ಸದಸ್ಯರು ಜ್ಯುಬಿಲಿ ಹಿಲ್ಸ್ ನಲ್ಲಿ ಇರುವ ಅಲ್ಲು ಅರ್ಜುನ್ ನಿವಾಸದ ಎದುರು ಪ್ರತಿಭಟನೆ ಮಾಡಲು ಬಂದಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನು ಭದ್ರತಾ ಸಿಬ್ಬಂದಿ ತಡೆದಿದ್ದಾರೆ. ಇದರಿಂದ ಇನ್ನಷ್ಟು ರೊಚ್ಚಿಗೆದ್ದ ಪ್ರತಿಭಟನಾಕಾರರು ಅಲ್ಲು ಅರ್ಜುನ್ ಅವರ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ವರದಿ ಆಗಿದೆ. ಮನೆಯ ಭದ್ರತಾ ಸಿಬ್ಬಂದಿ ಮೇಲೂ ಹಲ್ಲೆ ಮಾಡಲಾಗಿದೆ ಎನ್ನಲಾಗಿದೆ.
ಅಭಿಮಾನಿಯ ಸಾವಿನಿಂದ ಉಂಟಾದ ವಿವಾದ ದಿನೇ ದಿನೇ ಹೊಸ ಸ್ವರೂಪ ಪಡೆದುಕೊಳ್ಳುತ್ತಿದೆ.
ಅಲ್ಲು ಅರ್ಜುನ್ ಅವರ ಮೇಲೆ ತೆಲಂಗಾಣ ಪೊಲೀಸರು ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದರು. ಅನುಮತಿ ಪಡೆಯದೇ ಚಿತ್ರಮಂದಿರಕ್ಕೆ ಅಲ್ಲು ಅರ್ಜುನ್ ಭೇಟಿ ನೀಡಿದ್ದರಿಂದಲೇ ಕಾಲ್ತುಳಿತ ಉಂಟಾಯಿತು ಎಂದು ಪೊಲೀಸರು ಕೇಸ್ ದಾಖಲಿಸಿದ್ದಾರೆ. ಈ ಕೇಸ್ನಲ್ಲಿ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿತ್ತು. ಆದರೆ ಅದೇ ದಿನ ಮಧ್ಯಂತರ ಜಾಮೀನು ಸಿಕ್ಕಿದ್ದರಿಂದ ಅವರನ್ನು ಬಿಡುಗಡೆ ಮಾಡಲಾಗಿತ್ತು. ಈಗ ಅಲ್ಲು ಅರ್ಜುನ್ ಅವರು ಜನರ ಪ್ರತಿಭಟನೆಯ ಕಾವು ಎದುರಿಸುವಂತಾಗಿದೆ.
Click