ಕ್ರೈಂವೈರಲ್ ನ್ಯೂಸ್ಸಿನಿಮಾ

ಪುಷ್ಪ 2 ಸಿನಿಮಾದ ಪ್ರೀಮಿಯರ್‌ ಶೋ ವೇಳೆ ಕಾಲ್ತುಳಿತಕ್ಕೆ ಮಹಿಳೆ ಸಾವು..! ಪೊಲೀಸರಿಂದ ಲಾಠಿ ಚಾರ್ಜ್‌..!

232

ನ್ಯೂಸ್‌ ನಾಟೌಟ್‌: ನಟ ಅಲ್ಲು ಅರ್ಜುನ್‌ ಅಭಿನಯದ ಪುಷ್ಪ 2 ಪ್ರೀಮಿಯರ್‌ ಶೋ (Pushpa 2) ವೇಳೆ ಕಾಲ್ತುಳಿತ ಸಂಭವಿಸಿ ಓರ್ವ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ.

ಹೈದರಾಬಾದ್‌ ನ RTC ಕ್ರಾಸ್‌ ರೋಡ್ಸ್‌ ನ ಸಂಧ್ಯಾ ಥಿಯೇಟರ್‌ ನಲ್ಲಿ ಈ ದುರಂತ ಸಂಭವಿದೆ. ದಿಲ್‌ ಸುಖ್‌ ನಗರದ ರೇವತಿ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಪತಿ ಭಾಸ್ಕರ್ ಮತ್ತು ಇಬ್ಬರು ಮಕ್ಕಳೊಂದಿಗೆ ಕಾರ್ಯಕ್ರಮಕ್ಕೆ ಬಂದಿದ್ದರು ಎನ್ನಲಾಗಿದೆ.

ರಾತ್ರಿ 10:30 ರ ಸುಮಾರಿಗೆ ಥಿಯೇಟರ್‌ ನಲ್ಲಿ ಪ್ರೇಕ್ಷಕರು ಕಿಕ್ಕಿರಿದು ನೆರೆದಿದ್ದರು. ಸಿನಿಮಾ ಸ್ಕ್ರೀನಿಂಗ್‌ ನಲ್ಲಿ ಅಲ್ಲು ಅರ್ಜುನ್ ಹಾಜರಿದ್ದರು. ಈ ವೇಳೆ ನೂಕುನುಗ್ಗಲು ಜಾಸ್ತಿಯಾಗಿ ಕಾಲ್ತುಳಿತ ಸಂಭವಿಸಿದೆ. ಪರಿಣಾಮವಾಗಿ 39 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಆಕೆಯ ಪುಟ್ಟ ಮಗನ ಸ್ಥಿತಿ ಗಂಭೀರವಾಗಿದೆ.
ಜನರ ಗುಂಪನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್‌ ನಡೆಸಿದ್ದಾರೆ. ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದ್ದು, ಬಾಲಕನ ಸ್ಥಿತಿ ಗಂಭೀರವಾಗಿದೆ.

See also  ಕಾವು: ಬಿಜೆಪಿಗೆ ಗುಡ್ ಬೈ ಹೇಳಿ 'ಕೈ' ಹಿಡಿದ ಬಿಜೆಪಿ ಕಾರ್ಯಕರ್ತರು, ಪದ್ಮರಾಜ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget