ನ್ಯೂಸ್ ನಾಟೌಟ್: ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರೆ ಹತ್ಯೆ ಪ್ರಕರಣವನ್ನು ರಾಜ್ಯ ಸರಕಾರ ಗಂಭೀರವಾಗಿ ತೆಗೆದುಕೊಂಡಿದೆ. ಸ್ವತಃ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇದೀಗ ಪೊಲೀಸ್ ಅಧಿಕಾರಿಗಳ ಜತೆ ಮಾತನಾಡಿದ್ದಾರೆ. ಮಾತ್ರವಲ್ಲ ಬೆಳ್ಳಾರೆಗೆ ಇನ್ನು ಕೆಲವೇ ಕ್ಷಣಗಳಲ್ಲಿ ಹಿರಿಯ ಪೊಲೀಸ್ ಅಧಿಕಾರಿ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಲಿದ್ದಾರೆ. ಸಿಎಂ ಸೂಚನೆ ಮೇರೆಗೆ ಇವರು ಆಗಮಿಸುತ್ತಿರುವುದು ವಿಶೇಷವಾಗಿದೆ. ಕೊಲೆಯ ಹಿಂದೆ ಒಂದು ವ್ಯವಸ್ಥಿತ ಸಂಚು ಅಡಗಿದೆ. ಇದರ ಹಿಂದೆ ಇರುವ ಕಾಣದ ಕೈಗಳಿಗೆ ತಕ್ಕ ಶಿಕ್ಷೆಯಾಗುತ್ತದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ. ಅಲೋಕ್ ಕುಮಾರ್ ಕಾನೂನು-ಸುವ್ಯವಸ್ಥೆ ವಿಭಾಗದ ಎಡಿಜಿಪಿಯಾಗಿದ್ದಾರೆ.