ಕರಾವಳಿಪುತ್ತೂರು

ಪುತ್ತೂರು: ಎಲ್ಲವೂ ಭಗವಂತನ ಇಚ್ಛೆಯಂತೆ ನಡೆಯುತ್ತದೆ,ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ ಸಿಕ್ಕರೆ ಬೇಡ ಎನ್ನಲ್ಲ-ಸೂಲಿಬೆಲೆ

195

ನ್ಯೂಸ್‌ ನಾಟೌಟ್‌: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಭರ್ಜರಿ ತಯಾರಿಯಲ್ಲಿವೆ.ಟಿಕೆಟ್‌ ಹಂಚಿಕೆಗಳು ಕೂಡ ಕೆಲವೊಂದು ಕ್ಷೇತ್ರಗಳಿಗೆ ಆಗಿವೆ.ಹೀಗೆ ಕೆಲವು ಟಿಕೆಟ್‌ ಆಕಾಂಕ್ಷಿಗಳು ಅಸಮಾಧಾನಗೊಂಡಿದ್ದರೆ ಇನ್ನೂ ಕೆಲವರು ಟಿಕೆಟ್‌ ಸಿಗಬಹುದು ಅನ್ನುವ ನಿರೀಕ್ಷೆಯಲ್ಲಿದ್ದಾರೆ.

ಟಿಕೆಟ್‌ ಕುರಿತಂತೆ ಪುತ್ತೂರಿನಲ್ಲಿ ಮಾತನಾಡಿದ ಚಿಂತಕ ಚಕ್ರವರ್ತಿ ಸೂಲಿಬೆಲೆ “ಚುನಾವಣೆ ಟಿಕೆಟ್‌ ಕೇಳಿಕೊಂಡು ಹೋಗುವುದಿಲ್ಲ. ಚುನಾವಣೆ ಸ್ಪರ್ಧೆಗೆ ಅವಕಾಶ ಸಿಕ್ಕರೆ ವಿರೋಧ ಇಲ್ಲ ಎಂದು ತಿಳಿಸಿದ್ದಾರೆ.ಉತ್ತರ ಕನ್ನಡ ಬಿಜೆಪಿ ಟಿಕೆಟ್ ಬಗ್ಗೆ ಪುತ್ತೂರಿನಲ್ಲಿ ಮಾತನಾಡಿದ ಅವರು, ಚುನಾವಣೆ ಟಿಕೆಟ್ ಕೇಳಿಕೊಂಡು ಹೋಗುವುದಿಲ್ಲ. ಒಂದು ವೇಳೆ ಅಂಥ ಅವಕಾಶ ಬಂದರೆ ಸ್ಪರ್ಧಿಸಲು ವಿರೋಧ ಇಲ್ಲ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸುವ ವಿಚಾರ ಸದ್ಯ ವದಂತಿಯಷ್ಟೆ. 2014, 2019 ರಲ್ಲೂ ಇಂತಹ ವದಂತಿ ಹರಡಿತ್ತು. ಈಗ 2024 ರಲ್ಲೂ ಅಂಥದ್ದೊಂದು ವದಂತಿ ಹರಡಿದೆ ಎಂದಿದ್ದಾರೆ.ರಾಜಕೀಯ ಆಸಕ್ತಿಯ ಪ್ರಶ್ನೆ ಬೇರೆ. ಅದಕ್ಕೆ ನನ್ನ ವಿರೋಧವಿಲ್ಲ. ಆದರೆ ಸೀಟ್ ಕೇಳಿಕೊಂಡು ಹೋಗುವುದಿಲ್ಲ. ಅಂಥ ಅವಕಾಶ ಬಂದರೆ ಯಾವುದೇ ವಿರೋಧ ಇಲ್ಲ. ಏನಾದ್ರು ಭಗವಂತನ ಇಚ್ಛೆ ಇದ್ದರೆ ಅದು ಆಗೇ ಆಗುತ್ತೆ. ಆದರೆ ಇದುವರೆಗೆ ನನ್ನನ್ನ ಯಾರೂ ಸಂಪರ್ಕಿಸಿಲ್ಲ, ನಾನೂ ಸಂಪರ್ಕ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

See also  ಬೆಳ್ಳಾರೆ: ಗಂಡ –ಹೆಂಡತಿ ಜಗಳ ವಿಷ ಸೇವಿಸಿ ಸಾವಿನಲ್ಲಿ ಅಂತ್ಯ, ಪತ್ನಿ ಸಾವು, ಪತಿ ಜೀವನ್ಮರಣ ಹೋರಾಟ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget