Latestಕ್ರೈಂದೇಶ-ವಿದೇಶ

ಅಮೆರಿಕ ಮತ್ತು ಉಕ್ರೇನ್ ಅಧ್ಯಕ್ಷರ ನಡುವೆ ಮಾತಿನ ಚಕಮಕಿ..! ನೀವೇ 3ನೇ ಮಹಾಯುದ್ಧಕ್ಕೆ ಕಾರಣರಾಗುತ್ತೀರಿ ಎಂದು ಎಚ್ಚರಿಸಿದ ಟ್ರಂಪ್..! ವಿಡಿಯೋ ವೈರಲ್

665

ನ್ಯೂಸ್‌ ನಾಟೌಟ್ : ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಜೊತೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ನಡೆಸಿದ ಚರ್ಚೆ ಉದ್ವಿಗ್ನತೆ ಪಡೆದುಕೊಂಡಿದೆ, ಚರ್ಚೆ ವೇಳೆ ನಡೆದ ವಾಗ್ವಾದ ನಡೆದಿದ್ದು, ಎರಡು ದೇಶಗಳ ನಡುವಿನ ಸಂಬಂಧ ಹಳಸುವ ಸಾಧ್ಯತೆ ಹೆಚ್ಚಾಗಿದೆ.

ಓವಲ್ ಕಚೇರಿಯಲ್ಲಿ ನಾಯರಿಬ್ಬರ ಭೇಟಿ ಸಮಯದಲ್ಲಿ ಈ ವಿದ್ಯಮಾನ ನಡೆದಿದೆ. ಆರಂಭದಲ್ಲಿ ಅಮೆರಿಕ ಮತ್ತು ಉಕ್ರೇನ್‌ ನಡುವೆ ಖನಿಜ ಒಪ್ಪಂದಗಳ ನಡುವೆ ಮಾತುಕತೆ ಸಾಗಿತ್ತು. ಈ ವೇಳೆ ಭದ್ರತಾ ವಿಚಾರಗಳ ಕುರಿತು ಚರ್ಚಿಸಲು ಮುಂದಾದರು, ಆಗ ಟ್ರಂಪ್‌ ನಾನು ಭದ್ರತೆಯ ಬಗ್ಗೆ ಈಗ ಮಾತನಾಡಲು ಬಯಸುವುದಿಲ್ಲ. ಈಗ ಖನಿಜ ಒಪ್ಪಂದಗಳ ಬಗ್ಗೆ ಮಾತನಾಡಲು ಬಯಸುತ್ತೇನೆ ಎಂದರು. ಪರಿಸ್ಥಿತಿ ಕೈಮೀರಿ ಹೋಗುತ್ತಿದ್ದಂತೆ, ಟ್ರಂಪ್ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಅವರನ್ನು ಶ್ವೇತಭವನದಿಂದ ಹೊರಹೋಗುವಂತೆ ಸೂಚಿಸಿದರು.

ಝೆಲೆನ್ಸ್ಕಿ ಉಕ್ರೇನ್‌ ಗೆ ಯುಎಸ್ ಬೆಂಬಲವನ್ನು ಕೋರಿದರು. ಆದರೆ ಈ ಭೇಟಿ ಒಪ್ಪಂದಕ್ಕೆ ಸಹಿ ಹಾಕದೇ ಮತ್ತು ಜಂಟಿ ಪತ್ರಿಕಾಗೋಷ್ಠಿಯನ್ನು ರದ್ದುಗೊಳಿಸುವುದರೊಂದಿಗೆ ಕೊನೆಗೊಂಡಿತು. ಝೆಲೆನ್ಸ್ಕಿ ಅಮೆರಿಕದ ಬೆಂಬಲಕ್ಕೆ ಕೃತಜ್ಞತೆ ತೋರಿಸದಿರುವುದು ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ರಾಜತಾಂತ್ರಿಕ ನಿಲುವನ್ನು ಚರ್ಚಿಸಲು ಪ್ರಯತ್ನಿಸಿದ್ದಕ್ಕೆ ಟ್ರಂಪ್ ಮತ್ತು ವ್ಯಾನ್ಸ್ ತೀವ್ರವಾಗಿ ಟೀಕಿಸಿದರು. ನೀವು ಇದೇ ರೀತಿ ನಡೆದುಕೊಂಡರೆ, ಮುಂದಿನ ದಿನಗಳಲ್ಲಿ ಸಂಕಷ್ಟ ಎದುರಿಸಬೇಕಾಗುತ್ತದೆ ಎಂದು ಟ್ರಂಪ್ ಎಚ್ಚರಿಸಿದರು.

ಝಲೆನ್ಸ್ಕಿ ಭದ್ರತಾ ವಿಚಾರಗಳ ಕುರಿತು ಚರ್ಚಿಸಲು ಮುಂದಾದಾಗ ನೀವು ಲಕ್ಷಾಂತರ ಜನರ ಜೀವಗಳೊಂದಿಗೆ ಆಟವಾಡುತ್ತಿದ್ದೀರಿ, 3ನೇ ಮಹಾಯುದ್ಧದೊಂದಿಗೆ ಜೂಜಾಡುತ್ತಿದ್ದೀರಿ, ನಿಮ್ಮಿಂದಲೇ 3ನೇ ಮಹಾಯುದ್ಧ ನಡೆಯಬಹುದು. ನೀವು ಹೀಗೆ ಮಾಡುತ್ತಿರುವುದು ಈ ದೇಶಕ್ಕೆ ತುಂಬಾ ಅಗೌರವವಾಗಿದೆ ಎಂದು ಟ್ರಂಪ್ ನೇರ ವಾಗ್ದಾಳಿ ನಡೆಸಿದರು.

See also  ಪಿಕ್‌ ಪಾಕೆಟ್‌ ಮಾಡುತ್ತಿದ್ದ ಕಳ್ಳನಿಗೆ ಕಾದಿತ್ತು ಬಿಗ್‌ ಶಾಕ್‌..!ಪೊಲೀಸರು ಹಂಚಿಕೊಂಡ ವಿಡಿಯೋದಲ್ಲೇನಿದೆ..?
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget