Uncategorized

ಅಮೆರಿಕದ ಅಧ್ಯಕ್ಷರಾಗಿ 2ನೇ ಬಾರಿಗೆ ಆಯ್ಕೆಯಾದ ಡೊನಾಲ್ಡ್ ಟ್ರಂಪ್, ಬೆಂಬಲಿಗರನ್ನು ಉದ್ದೇಶಿಸಿ ಟ್ರಂಪ್ ಭಾಷಣ

ನ್ಯೂಸ್ ನಾಟೌಟ್: ಅಮೆರಿಕಾ ಅಧ್ಯಕ್ಷೀಯ ಚುನಾವಣೆಗೆ ಮಂಗಳವಾರದಿಂದ ಎರಡು ದಿನಗಳ ಕಾಲ ನಡೆದ ಚುನಾವಣೆಯಲ್ಲಿ ಕಮಲಾ ಹ್ಯಾರಿಸ್ ವಿರುದ್ಧ ಯುಎಸ್ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಎರಡನೇ ಭಾರಿಗೆ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಆಗಿದ್ದಾರೆ. ಈ ಮೂಲಕ ವಿಶ್ವದ ದೊಡ್ಡಣ್ಣ ರಾಷ್ಟ್ರದಲ್ಲಿ ನೆಟ್ಟಿದ್ದ ಕುತೂಹಲಕ್ಕೆ ಬುಧವಾರ(ನ.6) ತೆರೆ ಬಿದ್ದಿದೆ.

ಅಮೆರಿಕದ ಅಧ್ಯಕೀಯ ಚುನಾವಣೆ 2024ರ ಫಲಿತಾಂಶ ಹೊರ ಬಿದ್ದಿದೆ. ಇದರಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮತಗಳ ಎಣಿಕೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್‌ಗಿಂತ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇಲ್ಲಿಯವರೆಗೂ ಕಮಲಾ ಹ್ಯಾರಿಸ್ 214 ಮತಗಳನ್ನು ಪಡೆದಿದ್ದರೆ, ಡೊನಾಲ್ಡ್‌ ಟ್ರಂಪ್‌ ಅವರು ಅವರಿಗಿಂತ 251 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ.

ಅಮೆರಿಕದ ಅಧ್ಯಕೀಯ ಚುನಾವಣೆ ಕುರಿತು ಬುಧವಾರ ಸಂಜೆ ಹೊತ್ತಿಗೆ ಸಂಪೂರ್ಣ ಫಲಿತಾಂಶ ಪ್ರಕಟಗೊಳ್ಳಲಿದೆ. ಈಗಾಗಲೇ ರಿಪಬ್ಲಿಕನ್ ಪಕ್ಷದ ಡೊನಾಲ್ಡ್‌ ಟ್ರಂಪ್ ಫ್ಲೋರಿಡಾದಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಭಾಷಣ ಮಾಡಿದ್ದಾರೆ.

Related posts

ಗೂನಡ್ಕ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ

ಸುಳ್ಯ: ಭಾರೀ ಮಳೆಗೆ ಮನೆಯ ಬಳಿ ಕುಸಿದ ಬರೆ..! ಘಟನಾ ಸ್ಥಳಕ್ಕೆ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು ಭೇಟಿ

ರಸ್ತೆಯ ಚರಂಡಿಗೆ ಬಿದ್ದು 2 ವರ್ಷದ ಮಗು ಸಾವು..! ಇಲ್ಲಿದೆ ಮನಕಲಕುವ ಘಟನೆ