ನ್ಯೂಸ್ ನಾಟೌಟ್: ಅಮೆರಿಕದ ಸೇಂಟ್ ಲೂಯಿಸ್, ಮಿಸೌರಿ, ಕೆಂಟುಕಿ ಮತ್ತು ವರ್ಜೀನಿಯಾದಲ್ಲಿ ಬಿರುಗಾಳಿ ಅಬ್ಬರಕ್ಕೆ ಕನಿಷ್ಠ 35 ಮಂದಿ ಬಲಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಶುಕ್ರವಾರ ತಡರಾತ್ರಿಯಿಂದ ಈ ಪ್ರದೇಶಗಳಲ್ಲಿ ಬಿರುಗಾಳಿ ಬೀಸುತ್ತಿದ್ದು, ಸುಮಾರು 5,000ಕ್ಕೂ ಹೆಚ್ಚು ಕಟ್ಟಡಗಳು ನೆಲಸಮವಾಗಿದೆ. ಇಲ್ಲಿಯವರೆಗೆ 25 ಮಂದಿ ಸಾವನ್ನಪ್ಪಿದ್ದು, ಉಳಿದವರ ಸಾವಿನ ಬಗ್ಗೆ ಅಧಿಕೃತ ಘೋಷಣೆಯಾಗಿಲ್ಲ. ರಕ್ಷಣಾ ಕಾರ್ಯಾಚರಣೆ ಮುಂದುವರೆಯುತ್ತಿದೆ ಎಂದು ಕೆಂಟುಕಿ ಗವರ್ನರ್ ಆಂಡಿ ಬೆಶಿಯನ್ ಮಾಹಿತಿ ನೀಡಿದ್ದಾರೆ.
ಸೇಂಟ್ ಲೂಯಿಸ್‌ನ ಮೃಗಾಲಯ ಮತ್ತು ಐತಿಹಾಸಿಕ ಸ್ಮಾರಕಗಳು ಇರುವ ಫಾರೆಸ್ಟ್ ಪಾರ್ಕ್‌ನಲ್ಲಿ ಬಿರುಗಾಳಿ ಬೀಸಿದ ಪರಿಣಾಮ ಕಟ್ಟಡಗಳು ಹಾನಿಯಾಗಿವೆ. ಬಿರುಗಾಳಿ ಅಬ್ಬರಕ್ಕೆ ಗ್ರೇಟ್ ಲೇಕ್ಸ್ ನ ಲಕ್ಷಾಂತರ ಮನೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಬಿರುಗಾಳಿಯಿಂದಾಗಿ ಸೆಂಟಿನಿಯಲ್ ಕ್ರಿಶ್ಚಿಯನ್ ಚರ್ಚ್‌ನ ಒಂದು ಭಾಗ ಕುಸಿದು ಬಿದ್ದಿದೆ. ಮಿಡ್ ವೆಸ್ಟ್ ಹಾಗೂ ಮಧ್ಯ ಅಟ್ಲಾಂಟಿಕ್‌ನಲ್ಲಿ ಸಂಭವಿಸಿದ ಚಂಡಮಾರುತದ ಪರಿಣಾಮ ಬಿರುಗಾಳಿ ಬೀಸುತ್ತಿದೆ ಎನ್ನಲಾಗಿದೆ.
ವಿಚಾರಣೆಗೆ ಹಾಜರಾಗಲು 20 ದಿನಗಳ ಸಮಯಾವಕಾಶ ಕೋರಿದ ಮುತ್ತಪ್ಪ ರೈ ಪುತ್ರ..! ಈ ಬಗ್ಗೆ ಪೊಲೀಸರು ಹೇಳಿದ್ದೇನು..?