Latestಕ್ರೈಂದೇಶ-ವಿದೇಶರಾಜಕೀಯ

ಅಮೆರಿಕ ದಾಳಿ ಬಳಿಕ ಇರಾನ್ ಅಧ್ಯಕ್ಷ ಮಸೂದ್ ಜತೆ ಪ್ರಧಾನಿ ಮೋದಿ ಮಾತುಕತೆ..! ಕುತೂಹಲ ಕೆರಳಿಸಿದ ಚರ್ಚೆ..!

515

ನ್ಯೂಸ್ ನಾಟೌಟ್ :ಇರಾನ್ ​​ನ ಮೂರು ಪರಮಾಣು ಘಟಕಗಳ ಮೇಲೆ ಅಮೆರಿಕ ಇಂದು(ಜೂ.22) ದಾಳಿ ನಡೆಸಿದೆ. ಈ ಹಿನ್ನೆಲೆಯಲ್ಲಿ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್‌ ಜತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದಾರೆ. ಈ ಕುರಿತು ಪ್ರಧಾನಿ ಮೋದಿ ಎಕ್ಸ್ ​ನಲ್ಲಿ ಪೋಸ್ಟ್​ ಮಾಡಿದ್ದು, ಇಂದು ನಡೆದ ಘಟನೆ ತೀವ್ರ ಕಳವಳಕಾರಿಯಾಗಿದ್ದು, ನಾವು ಪ್ರಸ್ತುತ ಪರಿಸ್ಥಿತಿಯನ್ನು ವಿವರವಾಗಿ ಚರ್ಚಿಸಿದ್ದೇವೆ, ಪ್ರಾದೇಶಿಕ ಶಾಂತಿ, ಸ್ಥಿರತೆ ಮತ್ತು ಪರಸ್ಪರ ಸಹಕಾರಕ್ಕೆ ಆದ್ಯತೆ ನೀಡುವ ಬಗ್ಗೆ ಮಾತನಾಡಿದೆವು ಎಂದಿದ್ದಾರೆ.

ಇರಾನ್‌ ನಲ್ಲಿ ಇತ್ತೀಚೆಗೆ ನಡೆದ ಅಧ್ಯಕ್ಷೀಯ ಚುನಾವಣೆಯ ನಂತರ ಮಸೂದ್ ಪೆಜೆಶ್ಕಿಯನ್ ಗೆ ಹೊಸ ಜವಾಬ್ದಾರಿ ಸಿಕ್ಕಿದೆ. ಈ ಸಂದರ್ಭದಲ್ಲಿ, ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ್ದರು. ಭಾರತ-ಇರಾನ್ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಬಯಕೆಯನ್ನು ವ್ಯಕ್ತಪಡಿಸಿದ್ದರು.

ಯುನೈಟೆಡ್ ಸ್ಟೇಟ್ಸ್ ನಡೆಸಿದ ದಾಳಿಗಳಿಂದ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಇಸ್ರೇಲ್-ಇರಾನ್ ಸಂಘರ್ಷವು ಶೀಘ್ರವಾಗಿ ನಿಯಂತ್ರಣ ತಪ್ಪುವ ಅಪಾಯ ಈಗ ಹೆಚ್ಚುತ್ತಿದೆ. ಇದು ನಾಗರಿಕರು, ಪ್ರದೇಶ ಮತ್ತು ಪ್ರಪಂಚಕ್ಕೆ ಹಾನಿಕಾರಕ ಪರಿಣಾಮಗಳನ್ನು ಬೀರುತ್ತದೆ ಎಂದು ಹೇಳಿದ್ದಾರೆ.

ಅಮೆರಿಕದ ದಾಳಿ ಅಪಾಯಕಾರಿ ತಿರುವು ಎಂದು ಚೀನಾದ ಸರ್ಕಾರಿ ಮಾಧ್ಯಮ ಹೇಳಿದೆ.ಸಂವಾದಕ್ಕೆ ಆದ್ಯತೆ ನೀಡುವ ಮೂಲಕ ಸಮತೋಲಿತ, ರಾಜತಾಂತ್ರಿಕ ವಿಧಾನವನ್ನು ಅಳವಡಿಸಿಕೊಳ್ಳುವುದು ಮುಖ್ಯವಾಗಿದೆ ಎಂದು ಹೇಳಿದೆ.

 

See also  ಕ್ಯಾಂಟೀನ್ ಊಟದಲ್ಲಿ ಸತ್ತ ಹಲ್ಲಿ ಪತ್ತೆ..! ಗಾಬರಿಗೊಂಡು ವಾಂತಿ ಮಾಡಿಕೊಂಡ ಕಾರ್ಮಿಕರು..!
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget