ಕರಾವಳಿದಕ್ಷಿಣ ಕನ್ನಡದೇಶ-ಪ್ರಪಂಚದೇಶ-ವಿದೇಶ

‘ಅಮುಲ್’ ​ ‘ಮದರ್ ಡೈರಿ’ ಹಾಲಿನ ದರದಲ್ಲಿ ಹೆಚ್ಚಳ..! ನಂದಿನಿ ಹಾಲಿನ ಬೆಲೆಯೂ ಏರಿಕೆಯಾಗುವ ಸಾಧ್ಯತೆ..!

ನ್ಯೂಸ್ ನಾಟೌಟ್: ಅಮುಲ್​ ಇಂದಿನಿಂದಲೇ(june 3) ಜಾರಿಗೆ ಬರುವಂತೆ ಹಾಲಿನ ದರ ಹೆಚ್ಚಳ ಮಾಡಿದ್ದು, ಇದರ ಬೆನ್ನಲ್ಲೇ ದೆಹಲಿಯಲ್ಲಿ ಮದರ್ ಡೈರಿ ಕೂಡ ಹಾಲಿನ ಬೆಲೆ ಏರಿಕೆ ಮಾಡಿದೆ. ಇದೀಗ ಕರ್ನಾಟಕದಲ್ಲಿ ನಂದಿನಿ ಹಾಲಿನ ಬೆಲೆ ಕೂಡ ಏರಿಕೆಯಾಗಬಹುದು ಎಂಬ ಮಾಹಿತಿ ಹರಿದಾಡುತ್ತಿದೆ. ದೇಶದಾದ್ಯಂತ ಸಹಕಾರಿ ಹಾಲು ಒಕ್ಕೂಟಗಳು ಬೆಲೆ ಏರಿಕೆಗೆ ಮುಂದಾಗಿರುವುದೇ ಇದಕ್ಕೆ ಮುಖ್ಯ ಕಾರಣ ಎನ್ನಲಾಗಿದೆ.

ಮದರ್ ಡೈರಿಯು ದೆಹಲಿ-ಎನ್‌ಸಿಆರ್‌ನಲ್ಲಿ ಹಾಲಿನ ದರದಲ್ಲಿ ಲೀಟರ್‌ಗೆ 2 ರೂಪಾಯಿ ಹೆಚ್ಚಳ ಮಾಡಿದೆ. ದೆಹಲಿ-ಎನ್‌ಸಿಆರ್ ಮತ್ತು ಇತರ ಮಾರುಕಟ್ಟೆಗಳಲ್ಲಿ ಸೋಮವಾರದಿಂದಿಂದಲೇ (ಜೂನ್ 3) ಹಾಲಿನ ಎಲ್ಲಾ ವಿಧಗಳ ಮೇಲೆ ಬೆಲೆ ಏರಿಕೆ ಅನ್ವಯಿಸುತ್ತದೆ ಎಂದು ಕಂಪನಿ ತಿಳಿಸಿದೆ. ಅಮುಲ್​ ಕಂಪನಿಯು ಎಲ್ಲ ರೀತಿಯ ಹಾಲಿನ ಬೆಲೆಯನ್ನು ಲೀಟರ್​ಗೆ 2 ರೂ.ಗಳಷ್ಟು ಹೆಚ್ಚಿಸಿ ಸೋಮವಾರ ಬೆಳಗ್ಗೆ ಪ್ರಕಟಣೆ ಹೊರಡಿಸಿತ್ತು. ಕರ್ನಾಟಕದಲ್ಲಿ ನಂದಿನಿ ಹಾಲಿನ ದರವನ್ನು ಕೆಎಂಎಫ್​​​ ಕಳೆದ ವರ್ಷ ಆಗಸ್ಟ್​ನಲ್ಲಿ ಪ್ರತಿ ಲೀಟರ್​ಗೆ 3 ರೂ. ಹೆಚ್ಚಳ ಮಾಡಿತ್ತು.

Click 👇

https://newsnotout.com/2024/06/dowri-case-and-police-and-issue
https://newsnotout.com/2024/06/mutton-shop-and-16-year-old-boy-issue
https://newsnotout.com/2024/06/kannada-news-mvlvi-kannada-news-arrest

Related posts

ಯುವಕನನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ,ಮಾಜಿ ಸೈನಿಕನ ಈ ಕೃತ್ಯಕ್ಕೆ ಕಾರಣವಾದರೂ ಏನು?

ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ಆತ್ಮಹತ್ಯೆಗೆ ಶರಣು,ಉಜಿರೆಯಲ್ಲೊಂದು ಹೃದಯವಿದ್ರಾವಕ ಘಟನೆ

1993-94ರಲ್ಲಿ ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ವ್ಯಕ್ತಿ ಈಗ ಸನ್ಯಾಸಿ..! ಕುಂಭಮೇಳದಲ್ಲಿ ಕಾಣಿಸಿಕೊಂಡ ಕರ್ನಾಟಕದ ಸಾಧು..!