ಕ್ರೈಂರಾಜಕೀಯವೈರಲ್ ನ್ಯೂಸ್

ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಸುವೋಟೊ ಕೇಸ್..! ಅಷ್ಟಕ್ಕೂ ಸಂಸದ ಹೇಳಿದ್ದೇನು..?

245

ನ್ಯೂಸ್ ನಾಟೌಟ್‌: ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಶ್ರೀರಾಮಮಂದಿರ ವಿಚಾರದಲ್ಲಿ ರಾಜಕೀಯ ಜಟಾಪಟಿ ನಡೆಯುತ್ತಿದೆ. ಇದರ ನಡುವೆ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ಎಲ್ಲೆಡೆ ಸುದ್ದಿಯಾಗುತ್ತಿದೆ.

ಬಾಬ್ರಿ ಮಸೀದಿ ನಿರ್ನಾಮದಂತೆ ಭಟ್ಕಳದಲ್ಲಿಯೂ ಮಾಡುತ್ತೇವೆ. ಅದರ ಸಾಲಿಗೆ ಭಟ್ಕಳದ ಚಿನ್ನದ ಪಳ್ಳಿ ಸೇರಲಿದೆ. ಎಲ್ಲೆಲ್ಲಿ ದೇವಸ್ಥಾನ ಒಡೆದು ಮಸೀದಿಗಳನ್ನು ಕಟ್ಟಿದ್ದಾರೋ ಅಲ್ಲೆಲ್ಲ ಮತ್ತೆ ದೇವಸ್ಥಾನ ನಿರ್ಮಾಣವಾಗಲಿದೆ ಎಂದು ಪ್ರಚೋದನಾಕರಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಇದೀಗ ಅನಂತ ಕುಮಾರ್ ಹೆಗಡೆ ವಿರುದ್ಧ ಪ್ರಕರಣ ದಾಖಲಾಗಿದೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಸುವೋಟೊ ಕೇಸ್ ದಾಖಲಾಗಿದೆ ಎಂದು ವರದಿ ತಿಳಿಸಿದೆ.
ಬಾಬರಿ ಮಸೀದಿಯಂತೆ ದೇವಸ್ಥಾನಗಳ ಕುರುಹು ಇರುವ ಇತರ ಮಸೀದಿಗಳನ್ನು ಒಡೆಯುವುದಾಗಿ ಹೇಳಿದ್ದರು. ಅಲ್ಲದೇ ಸಿಎಂ ಸಿದ್ಧಾರಾಮಯ್ಯ ವಿರುದ್ಧ ಏಕವಚನ ಟೀಕೆ ಮಾಡಿದ್ದರು ಎನ್ನಲಾಗಿದೆ.

ಸಂಸದ ಅನಂತ ಕುಮಾರ್ ಹೆಗಡೆ ಹೇಳಿಕೆ ಮಾಧ್ಯಮಗಳಲ್ಲಿ ಪ್ರಸಾರವಾದ ಬೆನ್ನಲ್ಲೇ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪ್ರಕರಣ ದಾಖಲಿಸುವಂತೆ ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ಕುಮಟಾ ಪೊಲೀಸರು ದ್ವೇಷ ಭಾಷಣ ಹಾಗೂ ಜಿಲ್ಲೆಯಲ್ಲಿ ಅಶಾಂತಿ ಮೂಡಿಸಲು ಯತ್ನ ಮಾಡಿರುವುದಾಗಿ ಸೆಕ್ಷನ್ 505 ಹಾಗೂ 153 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

https://newsnotout.com/2024/01/pongal-narendra-modi/
See also  ಪೆರಾಜೆ: ಅಂಗನವಾಡಿ ಸಹಾಯಕಿ ಹಠಾತ್ ಕುಸಿದು ಬಿದ್ದು ಸಾವು
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget