ಬೆಂಗಳೂರು

ಕನ್ನಡ ಚಿತ್ರರಂಗದ ಖ್ಯಾತ ನಟಿ, ನಿರೂಪಕಿ ಅಪರ್ಣಾ ಇನ್ನಿಲ್ಲ, ಅಚ್ಚ ಕನ್ನಡದ ಪ್ರತಿಭಾವಂತೆಗೆ ಆಗಿದ್ದೇನು..?

147

ನ್ಯೂಸ್ ನಾಟೌಟ್: ನಟಿ, ನಿರೂಪಕಿ ಅಪರ್ಣಾ ವಸ್ತಾರೆ ಇಂದು (ಜು.11) ರಂದು ನಿಧನರಾಗಿದ್ದಾರೆ. ಅಪರ್ಣಾ ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಬನಶಂಕರಿಯ ಸ್ವಗೃಹದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ನಿರೂಪಣೆಯಷ್ಟೇ ಅಲ್ಲದೇ ಮಸಣದ ಹೂವು, ಇನ್ಸ್ ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಚಿತ್ರಗಳಲ್ಲೂ ಅಪರ್ಣಾ ನಟಿಸಿದ್ದನ್ನು ಸ್ಮರಿಸಬಹುದು.

ನಮ್ಮ ಮೆಟ್ರೋ ಸೇರಿದಂತೆ ಅನೇಕ ಪ್ರಕಟಣೆಗಳಿಗೆ ಧ್ವನಿ ನೀಡಿದ್ದ ಅಪರ್ಣಾ, ಮೂಡಲ ಮನೆ, ಮುಕ್ತ ಮುಕ್ತ ಮೊದಲಾದ ಧಾರಾವಾಹಿಗಳಲ್ಲೂ ನಟಿಸಿದ್ದರು. ದೀಪಾವಳಿ ಕಾರ್ಯಕ್ರಮದಲ್ಲಿ ಸತತ 8 ಗಂಟೆಗಳ ಕಾಲ ನಿರೂಪಣೆ ಮಾಡಿದ್ದ ಅಪರ್ಣಾ, 2013 ರಲ್ಲಿ ಬಿಗ್ ಬಾಸ್ ಶೋ ನಲ್ಲಿಯೂ ಭಾಗವಹಿಸಿದ್ದರು.

90ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳ ನಿರೂಪಣೆ ಮಾಡಿದ ನಂತರ ಭಾರತ ಸರ್ಕಾರದ ವಿವಿಧ ಭಾರತಿಯಲ್ಲಿ ರೇಡಿಯೋ ಜಾಕಿಯಾಗಿ ಕೂಡ ಅಪರ್ಣ ಕಾರ್ಯ ನಿರ್ವಹಿಸಿದ್ದರು.

See also  ಜೂನ್ 22ರಂದು ಕರ್ನಾಟಕ ಬಂದ್!,ದಿಢೀರ್ ಬಂದ್ ಗೆ ಕಾರಣವೇನು ಗೊತ್ತಾ?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget