Latest

ಬಂಟ್ವಾಳ:ನಾಪತ್ತೆಯಾಗಿ ಪತ್ತೆಯಾದರೂ ಮನೆಗೆ ಹೋಗಲು ಒಪ್ಪದ ದಿಗಂತ್ !;ಮಗನನ್ನು ಕಳುಹಿಸಿ ಕೊಡುವಂತೆ ಪೋಷಕರಿಂದ ಹೈಕೋರ್ಟ್ ಗೆ ಮನವಿ

999

ನ್ಯೂಸ್ ನಾಟೌಟ್: ಬಂಟ್ವಾಳದ ಫರಂಗಿಪೇಟೆ ನಿವಾಸಿ ದಿಗಂತ್ ಮನೆಗೆ ಹೋಗಲು ಒಪ್ಪುತ್ತಿಲ್ಲ ಎಂಬ ವಿಚಾರದ ಬಗ್ಗೆ ವರದಿಯಾಗಿದೆ. ಬಂಟ್ವಾಳ ಪೊಲೀಸರು ಹೈಕೋರ್ಟ್​ಗೆ ಸಲ್ಲಿಸಿದ ಅಫಿಡವಿಟ್​ ನಲ್ಲಿ ಈ ಬಗ್ಗೆ ಉಲ್ಲೇಖವಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ದಿಗಂತ್ ಪತ್ತೆ ಬಗ್ಗೆ ಹೈ ಕೋರ್ಟ್​ಗೆ ಅಫಿಡವಿಟ್​ ಸಲ್ಲಿಸಿದ್ದಾರೆ. ಅಫಿಡವಿಟ್​ನಲ್ಲಿ ದಿಗಂತ್ ಪತ್ತೆಯಾದ ಬಗ್ಗೆ ಹಾಗೂ ದಿಗಂತ್ ಹೇಳಿಕೆಗಳನ್ನು ಪೊಲೀಸರು ಉಲ್ಲೇಖಿಸಿದ್ದಾರೆ. ಇಂದು ಹೈ ಕೋರ್ಟ್​ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ನಡೆಯಿತು.

ವಿಚಾರಣೆ ವೇಳೆ, ಪೊಲೀಸರ ಪರ ವಕೀಲರು “ದಿಗಂತ್​ ಪೋಷಕರ ಬಳಿ ಹೋಗಲು ನಿರಾಕರಿಸುತ್ತಿರುವ ಬಗ್ಗೆ ಹೈ ಕೋರ್ಟ್‌ ಗೆ ತಿಳಿಸಿದರು. ಇದೇ ವೇಳೆ ಮಗನನ್ನು ಕಳುಹಿಸಿ ಕೊಡುವಂತೆ ದಿಗಂತ್ ಫೋಷಕರು ಹೈಕೋರ್ಟ್​ಗೆ ಮನವಿ ಮಾಡಿಕೊಂಡರು.ದಿಗಂತ್ ಪೋಷಕರ ಪರ ವಕೀಲರು: “ದಿಗಂತ್ ಪತ್ತೆಯಾದ ದಿನ ತಾಯಿ ಜೊತೆ ಫೋನ್​ನಲ್ಲಿ ಮಾತನಾಡಿದ ವಿವರ ನ್ಯಾಯಪೀಠಕ್ಕೆ ತಿಳಿಸಿದರು. ನಾನಾಗಿಯೇ ಹೋಗಿಲ್ಲ, ನನ್ನನ್ನು ಯಾರೋ ಕರೆದು ಕೊಂಡು ಹೋಗಿದ್ದಾರೆ ಎಂದು ದಿಗಂತ್​ ಹೇಳಿದನ್ನು ಕೋರ್ಟ್ ಮುಂದೆ ಪ್ರಸ್ತಾಪಿಸಿದರು.

ಆದರೆ, ದಿಗಂತ್ ಅವನಾಗಿಯೇ ಹೋಗಿರುವುದಾಗಿ ಹೇಳಿದ್ದಾನೆ. ಅವನು ಯಾವುದೇ ಅನಧಿಕೃತ ಬಂಧನಕ್ಕೆ ಒಳಗಾಗಿರಲಿಲ್ಲ. ಪರೀಕ್ಷೆ ಭಯದಿಂದ ತಾನಾಗಿಯೇ ಹೋಗಿದ್ದಾಗಿ ವಿಚಾರಣೆ ವೇಳೆ ತಿಳಿಸಿದ್ದಾಗಿ ಪೊಲೀಸರ ವರದಿಯಲ್ಲಿದೆ.ಪಿಯುಸಿ ಪರೀಕ್ಷೆ ಇನ್ನೂ ಮುಗಿಯದ ಕಾರಣ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಪೋಷಕರು ಇದೇ ವೇಳೆ ಮನವಿ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪರೀಕ್ಷೆ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳದಂತೆ ಹೈಕೋರ್ಟ್‌ ಸೂಚನೆ ನೀಡಿತು. ಅಲ್ಲದೇ, ಪರೀಕ್ಷೆ ವಿಚಾರದಲ್ಲಿ ವಿದ್ಯಾರ್ಥಿಗೆ ಯಾಕೆ ಒತ್ತಡ ಹೇರುತ್ತೀರಿ ಎಂದು ಪ್ರಶ್ನೆ ಮಾಡಿತು.ದಿಗಂತ್ ಜೊತೆ ಮಾತನಾಡಲು ಅವಕಾಶ ಕೊಡುವಂತೆ ಹೈಕೋರ್ಟ್ ಗೆ ಪೋಷಕರು ಮನವಿ ಮಾಡಿದರು.ದಿಗಂತ್ ವಿಚಾರದಲ್ಲಿ ಮಕ್ಕಳ ಕಲ್ಯಾಣ ಸಮಿತಿ ನಿರ್ಧಾರ ಕೈಗೊಳ್ಳಬೇಕೆಂದು ಹೈಕೋರ್ಟ್ ಸೂಚನೆ ನೀಡಿತು. ದಿಗಂತ್ ಸದ್ಯ ಬೊಂದೆಲ್ ಮಕ್ಕಳ ಕಲ್ಯಾಣ ಸಮಿತಿ ವಶದಲ್ಲಿದ್ದಾರೆ ಎಂದು ತಿಳಿದು ಬಂದಿದೆ.

See also  10 ಬಾರಿ ಹಾವು ಕಚ್ಚಿ ಸತ್ತ ವ್ಯಕ್ತಿಯ ಪ್ರಕರಣಕ್ಕೆ ವಿಚಿತ್ರ ತಿರುವು..! ಕೊಲೆ ಎಂದ ವೈದ್ಯಕೀಯ ವರದಿ..!
  Ad Widget   Ad Widget   Ad Widget   Ad Widget   Ad Widget   Ad Widget