ಉದ್ಯೋಗ ವಾರ್ತೆರಾಜ್ಯವೈರಲ್ ನ್ಯೂಸ್

ಅಂಗನವಾಡಿಗಳಲ್ಲಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸುವುದು ಹೇಗೆ..?

ನ್ಯೂಸ್ ನಾಟೌಟ್: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿಗಳಲ್ಲಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಆನ್​ಲೈನ್​​ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಮುಗಿಸಿದ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಎನ್ನಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೆಬ್ಸೈಟ್ ನ ಲಿಂಕ್ ಓಪನ್ ಆದ ನಂತರ, ಖಾಲಿ ಹುದ್ದೆಗಳು ಲಭ್ಯವಿರುವ ಜಿಲ್ಲೆ,ತಾಲೂಕು, ಅಧಿಸೂಚನೆ ಸಂಖ್ಯೆ, ಹುದ್ದೆಗಳ ಸಂಖ್ಯೆ ಆಯ್ಕೆ ಮಾಡಿಕೊಂಡು ಆನ್ಲೈನ್ ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು. ಅಪ್ಲಿಕೇಶನ್ ಸಲ್ಲಿಸಿದ ಬಳಿಕ ಫಾರ್ಮನ್ನು ಡೌನ್​​ಲೋಡ್ ಮಾಡಿಕೊಳ್ಳಿ.

ಪ್ರಸ್ತುತ ಬೆಳಗಾವಿ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿ ಅಡಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಆನ್​ಲೈನ್​​ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ. ಗ್ರಾಮೀಣ ವ್ಯಾಪ್ತಿಯ 7 ಅಂಗನವಾಡಿ ಕಾರ್ಯಕರ್ತೆಯರು ಮತ್ತು 26 ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದ್ದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನೀವು ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ: https://karnemakaone.kar.nic.in/abcd/

Click 👇

https://newsnotout.com/2024/07/koragajja-kola-at-kuttaru-kannada-newskatrina-kaif-kl-rahul
https://newsnotout.com/2024/07/fir-kannada-news-bengaluru-rakshith-shetty-copyright-issue

Related posts

ರೀಲ್ಸ್ ಮಾಡ್ತಿದ್ದ ಟೀಚರ್ ಶವ ಮಣ್ಣಿಲ್ಲಿ ಹೂತ ಸ್ಥಿತಿಯಲ್ಲಿ ಪತ್ತೆ..! ಶಾಲೆಗೆ ಹೋಗಿ ಬರ್ತೇನೆ ಎಂದವಳು ಮತ್ತೆ ಬರಲೇ ಇಲ್ಲ

ನಾನು ಓರ್ವ ಹಿಂದೂವಾಗಿ ಇಲ್ಲಿಗೆ ಬಂದಿದ್ದೇನೆ, ಬ್ರಿಟನ್ ಪ್ರಧಾನಿಯಾಗಿ ಅಲ್ಲ..! ಬ್ರಿಟನ್ ಪ್ರಧಾನಿ ರಿಷಿ ಸುನಕ್ ಹೀಗೆ ಹೇಳಿದ್ದೇಕೆ? ಬ್ರಿಟನ್ ಪ್ರಧಾನಿ ಮೇಜಿನ ಮೇಲೆ ಗಣೇಶನ ವಿಗ್ರಹ ಇರಿಸಲಾಗಿದೆಯಾ?

7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಯುದ್ಧವಿಮಾನ ಸಮುದ್ರದಾಳದಲ್ಲಿ ಪತ್ತೆಯಾಗಿದ್ದೇಗೆ..? ಅಂದು ನಾಪತ್ತೆಯಾಗಿದ್ದೇಕೆ..?