ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಹೊಸ ಸಚಿವ ಸಂಪುಟದ ಅಧಿಕೃತ ಪಟ್ಟಿ ಪ್ರಕಟಗೊಳ್ಳಲು ಕ್ಷಣಗಣನೆ ಆರಂಭವಾಗಿದ್ದು ಸುಳ್ಯದ ಶಾಸಕರಾಗಿರುವ ಅಂಗಾರ ಅವರು ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕರಿಸುವುದು ಖಚಿತವಾಗಿದೆ. ಈ ಬಗ್ಗೆ ಕರೆ ಬಂದಿರುವುದನ್ನು ಅವರ ಆಪ್ತ ಮೂಲಗಳು ನ್ಯೂಸ್ ನಾಟೌಟ್ ವೆಬ್ ಸೈಟ್‌ಗೆ ಖಚಿತಪಡಿಸಿವೆ. ಸಹಜವಾಗಿಯೇ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಜನರಲ್ಲಿ ಹೊಸ ಭರವಸೆ ಮೂಡಿದೆ. ಆದರೆ ಯಾವ ಖಾತೆ ಹಂಚಿಕೆಯಾಗಲಿದೆ ಅನ್ನುವುದನ್ನು ಕಾದು ನೋಡಬೇಕಿದೆ. ಮಧ್ಯಾಹ್ನ ಎರಡು ಗಂಟೆಗೆ ಇಂದು ನೂತನ ಸಚಿವರಿಗೆ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.