ಭಕ್ತಿಭಾವ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮೂರನೇ ಹಂತದ ಕಾಮಗಾರಿಗಳ ಬಗ್ಗೆ ಮುಜರಾಯಿ ಸಚಿವರಿಗೆ ಎಸ್‌.ಅಂಗಾರ ವಿವರ

1k

ಸುಳ್ಯ : ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಲಿರುವ ಮೂರನೇ ಹಂತದ ಕಾಮಗಾರಿಗಳ ಬಗ್ಗೆ ರಾಜ್ಯದ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಸುಳ್ಯ ಕ್ಷೇತ್ರದ ಶಾಸಕ ಸಚಿವ ಎಸ್ ಅಂಗಾರ ನೇತೃತ್ವದಲ್ಲಿ  ವಿಕಾಸ ಸೌಧದ ಕಚೇರಿಗೆ ಭೇಟಿ ನೀಡಿ ವಿವರಗಳನ್ನು ನೀಡಲಾಯಿತು.  ಈ ಸಂದರ್ಭದಲ್ಲಿ ಈ ಯೋಜನೆಯ ಬಗ್ಗೆ ಮುಜರಾಯಿ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಇದುವರೆಗೆ ಮೊದಲ ಮತ್ತು ಎರಡನೇ ಹಂತದಲ್ಲಿ ನಡೆದಿರುವಂತಹ ಕಾಮಗಾರಿಗಳ ವಿವರಗಳನ್ನು ಕೂಡ ನೀಡಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ನಡೆಯುವ ಕಾರ್ಯಚಟುವಟಿಕೆಗಳ, ಸೇವೆಗಳ ವಿವರಗಳನ್ನು ಪಡೆದುಕೊಂಡರು. ಆದಷ್ಟು ಶೀಘ್ರದಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುವುದಾಗಿ ತಿಳಿಸಿದರು. ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್, ಸುಳ್ಳಿ ಸದಸ್ಯ ಪ್ರಸನ್ನ ದರ್ಬೆ, ಪ್ರಮುಖರಾದ ಎ ವಿ ತೀರ್ಥರಾಮ, ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿಗಳಾದ ರಾಕೇಶ್ ರೈ ಕೆಡೆಂಜಿ, ಸುಭೋದ್ ಶೆಟ್ಟಿ ಮೇನಾಲ ಉಪಸ್ಥಿತರಿದ್ದರು.

See also  ತುಳುನಾಡ ದೈವಗಳ ನಿಂದಿಸಿದವರಿಗೆ ಶಿಕ್ಷೆಯಾಗಲಿ ಭಗವಂತ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget