Latestಕ್ರೈಂದೇಶ-ವಿದೇಶರಾಜ್ಯವೈರಲ್ ನ್ಯೂಸ್

ಅನ್ನಭಾಗ್ಯದ ಅಕ್ಕಿ ಮಹಾರಾಷ್ಟ್ರಕ್ಕೆ ಅಕ್ರಮ ಸಾಗಾಟ..! ಕಾಳಸಂತೆಗೆ ಹೋಗುತ್ತಿದ್ದ 40 ಟನ್ ಅಕ್ಕಿ ಜಪ್ತಿ..!

560
Pc Cr: Tv 9 kannada

ನ್ಯೂಸ್ ನಾಟೌಟ್: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆಯೂ ಒಂದು. ಬಡತನ ರೇಖೆಗಿಂತ ಕೆಳಗಿನವರಿಗೆ ಹಾಗೂ ಬಡವರಿಗೆ ಸರ್ಕಾರ ತಲಾ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದೆ. ಆದರೆ ಈ ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಾಟ ಮಾಡುತ್ತಿರುವುದು ವಿಜಯಪುರದಲ್ಲಿ ಪತ್ತೆಯಾಗಿದೆ.

ವಿಜಯಪುರ ನಗರದ ಹೊರ ಭಾಗದ ಎನ್ ​ಎಚ್ 50 ಯಲ್ಲಿ ಆಹಾರ ಮತ್ತು ನಾಗರೀಕ ಇಲಾಖೆ ಆಧಿಕಾರಿಗಳು ದಾಳಿ ನಡೆಸಿ ಸುಮಾರು 40 ಟನ್ ಅನ್ನಭಾಗ್ಯ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.

ನೆರೆಯ ಬಾಗಲಕೋಟೆ ಜಿಲ್ಲೆಯಿಂದ ವಿಜಯಪುರ ಮೂಲಕ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿಯನ್ನು ಸಾಗಾಟ ಮಾಡಲಾಗುತ್ತಿತ್ತು. 600 ಕ್ಕೂ ಅಧಿಕ ಪ್ಲಾಸ್ಟಿಕ್ ಮೂಟೆಗಳಲ್ಲಿ ಸಂಗ್ರಹಿಸಿ, ಲೋಡ್ ಮಾಡಿ ತಮಿಳುನಾಡು ರಾಜ್ಯ ನೋಂದಣಿಯ ಲಾರಿಯಲ್ಲಿ ಮಹಾರಾಷ್ಟ್ರಕ್ಕೆ ಸಾಗಾಟ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಾರಿ ತಡೆಯುತ್ತಲೇ ಚಾಲಕ ಹಾಗೂ ಕ್ಲೀನರ್ ಲಾರಿ ಬಿಟ್ಟು ಓಡಿ ಹೋಗಿದ್ದಾರೆ.

ಬಾಗಲಕೋಟೆ, ಕೊಪ್ಪಳ, ದಾವಣಗೆರೆ, ಶಿವಮೊಗ್ಗದ ಸಾಗರ ಭಾಗದಲ್ಲಿ ಅನ್ನಭಾಗ್ಯ ಅಕ್ಕಿ ಸಂಗ್ರಹಿಸಲಾಗಿದೆ ಎಂಬ ಸಂಶಯ ಮೂಡಿದೆ.
ಲಾರಿಯಲ್ಲಿದ್ದ ಅಕ್ಕಿಯನ್ನು ಪರಿಶೀಲನೆ ನಡೆಸಿ ಅದು ಅನ್ನಭಾಗ್ಯ ಅಕ್ಕಿ ಎಂಬುದನ್ನು ಆಧಿಕಾರಿಗಳು ಖಚಿತ ಪಡಿಸಿಕೊಂಡಿದ್ದಾರೆ. ಬಳಿಕ ಜಲನಗರ ಪೊಲೀಸರಿಗೆ ಕರೆ ಮಾಡಿ ಲಾರಿಯನ್ನು ಅವರ ವಶಕ್ಕೆ ನೀಡಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.

ಬಾಂಗ್ಲಾದೇಶದಲ್ಲಿ ಬಂಧನದಲ್ಲಿದ್ದ ಇಸ್ಕಾನ್‌ ನ ಚಿನ್ಮಯ್ ಕೃಷ್ಣದಾಸ್ ಬಿಡುಗಡೆ, 5 ತಿಂಗಳ ಬಳಿಕ ಜಾಮೀನು

See also  ಕುಕ್ಕೆ ಸುಬ್ರಹ್ಮಣ್ಯಕ್ಕೆ ಕತ್ರಿನಾ ಕೈಫ್ ಭೇಟಿ – ಸಂತಾನಕ್ಕಾಗಿ ಸರ್ಪ ಸಂಸ್ಕಾರ ಪೂಜೆ ಮಾಡಿದ್ರಾ ಬಾಲಿವುಡ್ ನಟಿ?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget