ಕ್ರೀಡೆ/ಸಿನಿಮಾ

“ವಿರಾಟ್​ ನೀವು ನಿಜವಾಗಿಯೂ ದೇವರ ಮಗು” ಪತಿ ಬಗ್ಗೆ ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ಪತ್ನಿ..!ಕೊಹ್ಲಿ ದಾಖಲೆಯ ಶತಕದ ಬಗ್ಗೆ ನಟಿ ಅನುಷ್ಕಾ ಶರ್ಮಾ ಬರೆದುಕೊಂಡಿದ್ದೇನು?

ನ್ಯೂಸ್ ನಾಟೌಟ್ : ವಿಶ್ವಕಪ್ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಅಮೋಘ ಪ್ರದರ್ಶನಕ್ಕೆ ಅವರ ಪತ್ನಿ ಅನುಷ್ಕಾ ಶರ್ಮಾ ಗಂಡನ ಗುಣಗಾನ ಮಾಡಿದ್ದಾರೆ.ಈ ಕುರಿತ ಅವರ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ಬಾರಿ ವೈರಲ್ ಆಗಿದೆ.

ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ರ ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಕಿವೀಸ್ ಪಡೆಯನ್ನು 70 ರನ್​ಗಳಿಂದ ಮಣಿಸಿದ ಟೀಂ ಇಂಡಿಯಾ 2023 ರ ಏಕದಿನ ವಿಶ್ವಕಪ್​ನ ಫೈನಲ್​ಗೇರಿದೆ.ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಪತಿ ವಿರಾಟ್ ಕೊಹ್ಲಿಯನ್ನು ವಾಂಖೆಡೆ ಸ್ಟೇಡಿಯಂನಲ್ಲಿ ಹುರಿದುಂಬಿಸಲು ಕ್ರೀಡಾಂಗಣಕ್ಕೆ ಬಂದಿದ್ದರು. ಕೊಹ್ಲಿ 50ನೇ ಶತಕ ಬಾರಿಸಿದಾಗ, ಅನುಷ್ಕಾ ಶರ್ಮಾ ಕ್ರೀಡಾಂಗಣದ ಗ್ಯಾಲರಿಯಿಂದ ವಿರಾಟ್​​ ಕೊಹ್ಲಿಗೆ ಪ್ಲೇನ್​ ಕಿಸ್ಸೊಂದನ್ನು ​ನೀಡಿದ್ದು,ಈ ದೃಶ್ಯ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.ಇದಕ್ಕೆ ಪ್ರತಿಯಾಗಿ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾಗೆ ಮೈದಾನದಿಂದ ಫ್ಲೈಯಿಂಗ್ ಕಿಸ್ ನೀಡಿದ್ದಾರೆ. ******** ಪತಿ ಕೊಹ್ಲಿ ಬಗ್ಗೆ ಅನುಷ್ಕಾ ಅವರು ‘ದೇವರ ಮಗು’ ಎಂದು ಭಾವನಾತ್ಮಕವಾಗಿ ಬರೆದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿದ್ದಾರೆ. ವಿರಾಟ್ ಕೊಹ್ಲಿ ಬುಧವಾರ 50 ODI ಶತಕಗಳನ್ನು ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ದಾಖಲೆಯನ್ನು ಬರೆದಿದ್ದು, ಕೊಹ್ಲಿ ಅವರ 117 ರನ್ ವಿಶ್ವಕಪ್‌ನಲ್ಲಿ ಅವರ ಮೂರನೇ ಶತಕವಾಗಿದೆ ಅನ್ನೋದು ಗಮನಾರ್ಹ ಸಂಗತಿ. ********** ದೇವರು ಅತ್ಯುತ್ತಮ ಸ್ಕ್ರಿಪ್ಟ್ ರೈಟರ್! ನನಗೆ ನಿಮ್ಮ ಪ್ರೀತಿಯ ಆಶೀರ್ವಾದ ಸಿಕ್ಕಿರುವ ಜೊತೆಗೆ ವಿರಾಟ್ ಕೊಹ್ಲಿಯ ಪ್ರೀತಿ ಕೂಡ ದೊರೆತಿರುವುದಕ್ಕೆ ಕೃತಜ್ಞನಾಗಿದ್ದೇನೆ. ಮುಂಬರುವ ದಿನಗಳಲ್ಲಿ ವಿರಾಟ್​ ಮತ್ತಷ್ಟು ಎತ್ತರಕ್ಕೆ ಬೆಳೆದು ಯಶಸ್ಸು ಗಳಿಸಿ, ಬೆಳವಣಿಗೆ ಹೊಂದಲಿ. ನೀವು ನಿಜವಾಗಿಯೂ ದೇವರ ಮಗು” ಎಂದು ಅನುಷ್ಕಾ ಇನ್ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದಾರೆ.ಭಾರತ ಕ್ರಿಕೆಟ್‌ ದಿಗ್ಗಜ ಸಚಿನ್‌ ತೆಂಡೂಲ್ಕರ್‌ ಅವರ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ದಾಖಲೆಯನ್ನು ಹಿಂದಿಕ್ಕಿದ ಕೊಹ್ಲಿ, ಇದು ನನಗೆ ಕನಸಿನಂತೆ ಭಾಸವಾಗುತ್ತಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

Related posts

ಅಂತಾರಾಷ್ಟ್ರೀಯ ಮತ್ತು ದೇಶೀಯ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ ಶಿಖರ್‌ ಧವನ್‌..! ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಟೀಂ ಇಂಡಿಯಾದ ಆಟಗಾರ

ಸಂಬಂಧದಲ್ಲಿ ಅಣ್ಣ-ತಂಗಿಯಾಗಿದ್ದಾರೆಂದು ಲವ್ ಮಾಡಿದ್ದಕ್ಕೆ ವಿರೋಧ,ಮನೆಯವರು ಒಪ್ಪದಿರೋದಕ್ಕೆ ಬದುಕನ್ನೇ ಅಂತ್ಯ ಮಾಡಿಕೊಂಡ ಜೋಡಿ..!

ಹುಲಿ ಉಗುರು: ನಿರಾಳವಾದದ್ದು ಹೇಗೆ ನಟ ಜಗ್ಗೇಶ್..? ಕೋರ್ಟ್ ಹೇಳಿದ್ದೇನು? ಅರಣ್ಯಾಧಿಕಾರಿಗಳನ್ನು ಕೋರ್ಟ್ ಟೀಕಿಸಿದ್ದೇಕೆ?