Latestಕ್ರೈಂಬೆಂಗಳೂರುವೈರಲ್ ನ್ಯೂಸ್ಸಿನಿಮಾ

ಇಂದು(ಎ.8) ವಿಚಾರಣೆಗೆ ದರ್ಶನ್‌ ಗೈರಾದದ್ದೇಕೆ..? ಅಸಮಾಧಾನ ವ್ಯಕ್ತಪಡಿಸಿದ ಕೋರ್ಟ್..!

466

ನ್ಯೂಸ್ ನಾಟೌಟ್: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್‌ ವಿಚಾರಣೆ ಹಾಜರಾಗಿದ್ದಕ್ಕೆ 57ನೇ ಸಿಸಿಹೆಚ್ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಇಂದು(ಎ.8) ದರ್ಶನ್‌ ನಿಗದಿಯಾಗಿದ್ದ ಕೋರ್ಟ್‌ ವಿಚಾರಣೆಗೆ ಹಾಜರಾಗಲಿಲ್ಲ.
ವಿಚಾರಣೆ ಸಂದರ್ಭದಲ್ಲಿ ವಕೀಲರು, ದರ್ಶನ್‌ ಅವರಿಗೆ ಬೆನ್ನು ನೋವಿದೆ. ಹೀಗಾಗಿ ವಿಚಾರಣೆಗೆ ಬರಲು ವಿನಾಯಿತಿ ಕೋರಿದರು.

ಈ ವೇಳೆ ನ್ಯಾಯಾಧೀಶರು ವಿಚಾರಣೆಗೆ ಆರೋಪಿಗಳು ಗೈರಾಗುವುದು ಸರಿಯಲ್ಲ. ವಿಚಾರಣೆಗೆ ಇದ್ದಾಗ ಆರೋಪಿಗಳು ಹಾಜರಾಗಲೇಬೇಕು. ವಿನಾಯಿತಿಗೆ ಮನವಿ ಮಾಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಿಚಾರಣೆ ವೇಳೆ ದರ್ಶನ್‌ ಪರ ವಕೀಲರು, ದರ್ಶನ್‌ ಮನೆಯಿಂದ ಜಪ್ತಿ ಮಾಡಿಕೊಂಡಿದ್ದ 75 ಲಕ್ಷ ರೂ. ಹಣವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಈ ವೇಳೆ ಕೋರ್ಟ್‌, ಆದಾಯ ತೆರಿಗೆ ಇಲಾಖೆ ವಾದ ಮಂಡಿಸಿದ ಬಳಿಕ ಆದೇಶ ನೀಡುವುದಾಗಿ ಹೇಳಿ ಮೇ 20ಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಿತು. ಈ ವೇಳೆ ತನಿಖೆ ವೇಳೆ ಜಪ್ತಿ ಮಾಡಿದ್ದ ಮೊಬೈಲ್‌ ಗಳನ್ನು ಹಿಂತಿರುಗಿಸಲು ಆರೋಪಿಗಳ ಪರ ವಕೀಲರು ಅರ್ಜಿ ಸಲ್ಲಿಸಿದರು.

ಇಂದಿನ ವಿಚಾರಣೆಗೆ ಪವಿತ್ರಾ ಗೌಡ ಮತ್ತು ಉಳಿದ ಆರೋಪಿಗಳು ಕೋರ್ಟ್‌ಗೆ ಹಾಜರಾಗಿದ್ದರು. ಸಹೋದರನ ಜೊತೆ ಪವಿತ್ರಾ ಗೌಡ ಆರ್ ಆರ್ ನಗರದ ಮನೆಯಿಂದ ಕೋರ್ಟ್‌ಗೆ ಆಗಮಿಸಿದ್ದರು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಜಾಮೀನು ಪಡೆದರೂ ಪ್ರತಿ ತಿಂಗಳು ನ್ಯಾಯಾಲಯಕ್ಕೆ ಹಾಜರಾಗಬೇಕು ಎಂಬ ಷರತ್ತು ಹಿನ್ನೆಲೆಯಲ್ಲಿ ಇಂದು ಆರೋಪಿಗಳು ಕೋರ್ಟ್​ಗೆ ಹಾಜರಾಗಿದ್ದರು.

ಶಾಲೆಯ ಬೆಂಕಿ ಅವಘಡದಲ್ಲಿ ಪವನ್ ಕಲ್ಯಾಣ್ ಪುತ್ರನಿಗೆ ತೀವ್ರ ಗಾಯ..! ಆಂಧ್ರದ ಉಪಮುಖ್ಯಮಂತ್ರಿಯ ಮೂರನೇ ಹೆಂಡತಿಯ ಮಗನಿಗೆ ಸಿಂಗಪುರದಲ್ಲಿ ಚಿಕಿತ್ಸೆ..!

ರಾತ್ರಿ BJP ನಾಯಕನ ನಿವಾಸದ ಬಳಿ ಭಾರೀ ಸ್ಫೋಟ..! ಬೆಚ್ಚಿಬಿದ್ದ ಗಾಢ ನಿದ್ರೆಯಲ್ಲಿದ್ದ ಜನ..!

ಬೆಲೆ ಏರಿಕೆಗಳ ಬೆನ್ನಲ್ಲೇ ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ತಯಾರಿ..! ಮಂಗಳೂರು, ಉಡುಪಿ ಜನರಿಗೆ ಮತ್ತೊಂದು ಶಾಕ್..!

See also  ಪದ್ಮಲತಾ ಸಹೋದರಿಯಿಂದ ಎಸ್ಐಟಿಗೆ ದೂರು ಸಲ್ಲಿಕೆ, 3 ದಶಕದ ಬಳಿಕ ಮತ್ತೊಮ್ಮೆ ಮುನ್ನೆಲೆಗೆ ಬಂದ ಪ್ರಕರಣ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget