ಕರಾವಳಿ

ಅರಂತೋಡು: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಸಂವರ್ಧನಾ ಸಮಿತಿಯಿಂದ ಸಂಸ್ಕೃತಿ ಶಿಬಿರ

551
Spread the love

ಸುಳ್ಯ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂವರ್ಧನಾ ಸಮಿತಿ ಅರಂತೋಡು ಗ್ರಾಮ ಇದರ ವತಿಯಿಂದ ಅರೆಭಾಷೆ ಸಂಸ್ಕೃತಿ ಶಿಬಿರವು ಇಂದು ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿರಿ ಸೌಧ ಸಭಾ ಭವನದಲ್ಲಿ ನಡೆಯಿತು.

ಹಿರಿಯ ಸಂಪನ್ಮೂಲ ವ್ಯಕ್ತಿ ವಾಸುದೇವ ಗೌಡ ಪಾರೆಮಜಲು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಅಧ್ಯಕ್ಷತೆ ವಹಿಸಿದ್ದರು. ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಹರಿಣಿ ದೇರಾಜೆ, ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪಿ.ಬಿ. ದಿವಾಕರ ರೈ, ಅರಂತೋಡು ಗ್ರಾಮ ಪಂಚಾಯತ್ ಸದಸ್ಯ ಶಿವಾನಂದ ಕುಕ್ಕುಂಬಳ, ಅರಂತೋಡು ಗ್ರಾಮ ಗೌಡ ಸಮಿತಿಯ ಅಧ್ಯಕ್ಷ ತೀರ್ಥರಾಮ ಅಡ್ಕಬಳೆ, ಅರಂತೋಡು ಶ್ರೀ ತೋಟಂ ಪಾಡಿ ಉಳ್ಳಾಕುಲು ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮೇದಪ್ಪ ಗೌಡ ಉಳುವಾರು, ಅರಂತೋಡು ರಬ್ಬರ್ ಉತ್ಪಾದಕರ ಸಂಘದ ಅಧ್ಯಕ್ಷ ವೆಂಕಟ್ರಮಣ ಪೆತ್ತಾಜೆ, ಅರಂತೋಡು ಶಾಲಾ ಎಸ್ ಡಿಎಂಸಿ ಅಧ್ಯಕ್ಷ ಪದ್ಮಯ್ಯ ಬೊಳ್ಳೂರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

See also  ರೈತರಿಗಾಗಿ ಹಲವು ವಿಭಿನ್ನ ಕಾರ್ಯಕ್ರಮಗಳನ್ನು ರೂಪಿಸಿದ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಲಾಭದಾಯಕ ಹೆಜ್ಜೆಯಿಟ್ಟು ಮಾದರಿಯಾಗಿದ್ದೇಗೆ..?
  Ad Widget   Ad Widget   Ad Widget   Ad Widget   Ad Widget   Ad Widget