Latestಕ್ರೀಡೆಕ್ರೈಂವೈರಲ್ ನ್ಯೂಸ್

ಅರ್ಜುನ ಪ್ರಶಸ್ತಿ ಪುರಸ್ಕೃತೆ, ಮಾಜಿ ವಿಶ್ವ ಚಾಂಪಿಯನ್‌ ಬಾಕ್ಸರ್‌ ಗೆ ವರದಕ್ಷಿಣೆ ಕಿರುಕುಳ..! ಕಬಡ್ಡಿ ಆಟಗಾರ ಪತಿ ವಿರುದ್ಧ ದೂರು ದಾಖಲು..!

544

ನ್ಯೂಸ್‌ ನಾಟೌಟ್ : ಅರ್ಜುನ ಪ್ರಶಸ್ತಿ ಪುರಸ್ಕೃತೆ, ಮಾಜಿ ವಿಶ್ವ ಚಾಂಪಿಯನ್‌ ಬಾಕ್ಸರ್‌ ಸವೀತಿ ಬೂರಾ(saweety boora) ತಮ್ಮ ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಹೊರಿಸಿದ್ದಾರೆ.
ಬೂರಾ ಏಷ್ಯನ್ ಗೇಮ್ಸ್‌ ನಲ್ಲಿ ಕಂಚಿನ ಪದಕ ಗೆದ್ದ ಕಬಡ್ಡಿ ಆಟಗಾರ ಪತಿ ದೀಪಕ್ ಹೂಡಾ ಮತ್ತು ಅವರ ಕುಟುಂಬದವರು ವರದಕ್ಷಿಣೆಗಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಎಫ್‌ಐಆರ್ ದಾಖಲಿಸಿದ್ದಾರೆ.

ಈ ಇಬ್ಬರೂ 2022 ರಲ್ಲಿ ವಿವಾಹವಾಗಿದ್ದರು. ಪತಿ ವಿರುದ್ಧ ಬೂರಾ ಹರಿಯಾಣದ ಹಿಸಾರ್‌ ನಲ್ಲಿ ಎಫ್‌ ಐ ಆರ್ ದಾಖಲು ಮಾಡಿದ್ದಾರೆ.
ಫೆ.25 ರಂದು ಬಾಕ್ಸರ್‌ ಸವೀತಿ ಬೂರಾ ಸಲ್ಲಿಸಿದ ದೂರಿನ ಆಧಾರದ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ. ಆಕೆಯ ಪತಿಗೆ ನಾವು 2-3 ಬಾರಿ ನೋಟಿಸ್ ನೀಡಿದ್ದೇವೆ. ಆದರೆ, ಅವರು ವಿಚಾರಣೆಗೆ ಹಾಜರಾಗಿಲ್ಲ ಎಂದು ಹಿಸಾರ್‌ ನ ಮಹಿಳಾ ಪೊಲೀಸ್ ಠಾಣೆಯ ಎಸ್‌ಎಚ್‌ಒ ಸೀಮಾ ತಿಳಿಸಿದ್ದಾರೆ.

ಈ ಬಗ್ಗೆ ಹೂಡಾ ಪ್ರತಿಕ್ರಿಯೆ ನೀಡಿದ್ದು, ನಾನು ಆರೋಗ್ಯದ ಸಮಸ್ಯೆಯಿಂದಾಗಿ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿಲ್ಲ. ವೈದ್ಯಕೀಯ ಪ್ರಮಾಣಪತ್ರವನ್ನು ಸಲ್ಲಿಸಿದ್ದೇನೆ. ವಿಚಾರಣೆಗೆ ಹಾಜರಾಗಲು ಸಮಯಾವಕಾಶ ಕೇಳಿದ್ದೇನೆ. ಖಂಡಿತವಾಗಿಯೂ ಠಾಣೆಗೆ ತೆರಳಿ ವಿಚಾರಣೆ ಎದುರಿಸಲಿದ್ದೇನೆ. ಆದರೆ, ನನ್ನ ಹೆಂಡತಿಯ ವಿರುದ್ಧ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ.   

See also  ಉಚ್ಚಾಟನೆ ನಿರ್ಧಾರ ಮರುಪರಿಶೀಲನೆ ಮಾಡಲು ಒತ್ತಾಯವನ್ನೂ ಮಾಡುವುದಿಲ್ಲ ಎಂದ ಯತ್ನಾಳ್..! ನನ್ನ ಉಚ್ಛಾಟನೆಗೆ ಕಾರಣಕರ್ತರಾದವರು ನಾಶವಾಗುತ್ತಾರೆ ಎಂದ ಉಚ್ಚಾಟಿತ ಶಾಸಕ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget