ಕ್ರೈಂದೇಶ-ಪ್ರಪಂಚದೇಶ-ವಿದೇಶವೈರಲ್ ನ್ಯೂಸ್

ಇವಿಎಂ ತಿರುಚಲು ಕೋಟಿಗಟ್ಟಲೆ ಹಣಕ್ಕೆ ಬೇಡಿಕೆಯಿಟ್ಟಿದ್ದ ಯೋಧ..! ಬಂಧನದ ಬಳಿಕ ಆತ ಹೇಳಿದ್ದೇನು..?

ನ್ಯೂಸ್ ನಾಟೌಟ್: ವಿದ್ಯುನ್ಮಾನ ಮತಯಂತ್ರಗಳನ್ನು (ಇವಿಎಂ) ತಿರುಚುವ ಮೂಲಕ ನಿರ್ದಿಷ್ಟ ಅಭ್ಯರ್ಥಿಗೆ ನೆರವಾಗುವುದಾಗಿ ಶಿವಸೇನಾ (ಯುಬಿಟಿ) ಮುಖಂಡ ಅಂಬಾದಾಸ್ ದಾನ್ವೆ ಬಳಿ ₹2.5 ಕೋಟಿಗೆ ಬೇಡಿಕೆಯಿಟ್ಟಿದ್ದ ಯೋಧರೊಬ್ಬರನ್ನು ಪೊಲೀಸರು ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಬಂಧಿಸಿದ್ದಾರೆ. ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಸಂಭಾಜಿನಗರದ ಕೇಂದ್ರ ಬಸ್ ನಿಲ್ದಾಣದ ಬಳಿಯ ಹೋಟೆಲ್‌ನಲ್ಲಿ ಆರೋಪಿಯು, ರಾಜೇಂದ್ರ ದಾನ್ವೆ ಅವರನ್ನು ಭೇಟಿಯಾಗಿದ್ದ.

ಕೂಡಲೇ ದಾನ್ವೆ ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು 24 ವರ್ಷದ ಮಾರುತಿ ಢಾಕ್ನೆ ಎಂದು ಗುರುತಿಸಲಾಗಿದೆ. ಈತ ವಿದ್ಯುನ್ಮಾನ ಮತಯಂತ್ರಗಳನ್ನು ತಿರುಚುವ ಮೂಲಕ ನಿರ್ದಿಷ್ಟ ಅಭ್ಯರ್ಥಿಗೆ ಹೆಚ್ಚು ಮತಗಳನ್ನು ಪಡೆಯಲು ಸಹಾಯ ಮಾಡುವುದಾಗಿ ಹೇಳಿ ಹಣಕ್ಕಾಗಿ ಬೇಡಿಕೆಯಿಟ್ಟಿದ್ದಾನೆ ಎಂದು ಆರೋಪಿಸಿ ರಾಜ್ಯ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ದಾನ್ವೆ ಪೊಲೀಸರಿಗೆ ಲಿಖಿತ ದೂರು ನೀಡಿದ್ದರು.

‘ಘಟನೆ ಸಂಬಂಧ ಕ್ರಾಂತಿ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯು ಸಾಲದ ಸಮಸ್ಯೆಗೆ ಸಿಲುಕಿದ್ದು, ಇದರಿಂದ ಹೊರಬರಲು ಈ ರೀತಿ ಕುತಂತ್ರ ಮಾಡಿದ್ದಾನೆ ಎಂದು ಪೊಲೀಸರ ಮುಂದೆ ಆತ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 420 (ವಂಚನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Related posts

10 ದಿನಗಳ ಕಾಲ ಥಿಯೇಟರ್‌ ಬಂದ್..! ಇಲ್ಲಿದೆ ಶಾಕಿಂಗ್ ಕಾರಣ..!

ಸಿಎಂ ಕುಳಿತಿದ್ದ ವೇದಿಕೆಗೆ ಏಕಾಏಕಿ ನುಗ್ಗಿದ ಯುವಕ..! ವಿಧಾನಸೌಧ ಆವರಣದಲ್ಲೇ ಭದ್ರತಾ ವೈಫಲ್ಯ..! ಇಲ್ಲಿದೆ ವೈರಲ್ ವಿಡಿಯೋ

ಮಡಿಕೇರಿ: ಪತ್ನಿಯನ್ನು ಗುಂಡಿಟ್ಟು ಕೊಂದ ಪತಿ