ಕರಾವಳಿ

ಉದಯ್ ಕುಮಾರ್ ಲಾಯಿಲಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ

603

ಲಾಯಿಲ: ಜಾನಪದ ಕ್ಷೇತ್ರದಲ್ಲಿ ಕಳೆದ ಹದಿನೇಳು ವರ್ಷಗಳಿಂದ ದುಡಿದಿರುವ ಉದಯ್ ಕುಮಾರ್ ಲಾಯಿಲಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಲಭಿಸಿದೆ.

ತಾಲೂಕು, ಜಿಲ್ಲೆ ಮತ್ತು ರಾಜ್ಯ ಮಟ್ಟದ ವಿವಿಧ ಕಾರ್ಯಕ್ರಮಗಳಲ್ಲಿ ಕಲಾ ನಿರ್ದೇಶಕರಾಗಿ, ಸಂಘಟಕರಾಗಿ, ಕಲಾವಿದರಾಗಿ ಮಾತ್ರವಲ್ಲದೆ ರಾಜ್ಯ ಮಟ್ಟದ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೀರ್ಪುಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಬಹುಮುಖ ಪ್ರತಿಭೆ, ಲಾಯಿಲ ಗ್ರಾಮ ಪುತ್ರಬೈಲು ನಿವಾಸಿ ಉದಯ್ ಕುಮಾರ್ ಗೆ ಮೇ 25 ರಂದು ಬೆಂಗಳೂರು ರವೀಂದ್ರ ಕಲಾ ಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಜಾನಪದ ಕ್ಷೇತ್ರದಲ್ಲಿ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಬಾರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಲಭಿಸಿದೆ. ಇವರು ಮೂಲ ಜನಪದ ಕಲೆಯ ವಿವಿಧ ಪ್ರಕಾರಗಳನ್ನು ತಾಲೂಕು ಹಾಗೂ ಜಿಲ್ಲೆಗೆ ಪರಿಚಯಿಸಿದವರು. ಹಾಡು, ನೃತ್ಯ, ಜನಪದ ಕಮ್ಮಟ, ಬೀದಿನಾಟಕ, ಜನಜಾಗೃತಿ ಕಾರ್ಯಕ್ರಮ, ಮಕ್ಕಳ ಬೇಸಿಗೆ ಶಿಬಿರದ ಆಯೋಜನೆ, ತುಳುನಾಡ ವೈಭವ ಕಾರ್ಯಕ್ರಮ ಮೊದಲಾದವುಗಳ ಜೊತೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕೃತ ಜನಪದ ಕಲಾವಿದರಾಗಿರುವ ಇವರು ದ.ಕ ಜಿಲ್ಲಾ ಕನ್ನಡ ಜಾನಪದ ಪರಿಷತ್ ಸಂಘಟನಾ ಕಾರ್ಯದರ್ಶಿಯಾಗಿದ್ದಾರೆ.

See also  ದೇಹದಲ್ಲಿನ ರಕ್ತದ ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ತರಕಾರಿ ಯಾವುದು…?
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget