ಕರಾವಳಿರಾಜಕೀಯ

ಬಿ.ಎಲ್ ಸಂತೋ‍ಷ್ ಇರುವವರೆಗೂ ಬಿಜೆಪಿಗೆ ಸೋಲು ನಿಶ್ಚಿತ.. ಕಿಡಿಕಾರಿದ ರೇಣುಕಾಚಾರ್ಯ ಬೆಂಬಲಿಗರು

ನ್ಯೂಸ್ ನಾಟೌಟ್ : ಬಿಎಲ್ ಸಂತೋಷ್ ಹಾಗೂ ನಳಿನ್ ಕುಮಾರ್ ಕಟೀಲ್ ವಿರುದ್ಧವೇ ರೇಣುಕಾಚಾರ್ಯ ಬೆಂಬಲಿಗರು ಕಿಡಿಕಾರಿದ್ದಾರೆ.ಶಾಸಕ ಎಂ.ಪಿ ರೇಣುಕಾಚಾರ್ಯ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದು, ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ.

ಹೊನ್ನಾಳಿಯಲ್ಲಿ ರೇಣುಕಾಚಾರ್ಯ ನಿವಾಸದ ಮುಂದೆ ಜಮಾಯಿಸಿದ ಬೆಂಬಲಿಗರು, ಬಿಎಲ್ ಸಂತೋಷ್ ರಾಜ್ಯವನ್ನು ಬಿಟ್ಟು ತೊಲಗಬೇಕಿದೆ. ಆತ ಇರುವವರೆಗೂ ರಾಜ್ಯದಲ್ಲಿ ಬಿಜೆಪಿ ಗೆಲ್ಲುವುದಿಲ್ಲ. ಆತ ಹೋದರೆ ಮಾತ್ರ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಹೇಳುತ್ತಾ ಬಿಎಲ್ ಸಂತೋಷ್ ವಿರುದ್ದ ಧಿಕ್ಕಾರ ಕೂಗಿದ್ದಾರೆ.

Related posts

ಸರಕಾರಿ ನೌಕರರು ಕಚೇರಿಗಳಲ್ಲಿ ಜೀನ್ಸ್-ಟೀ ಶರ್ಟ್ ಧರಿಸುವಂತಿಲ್ಲ

ಮಂಗಳೂರು: ರಾತ್ರಿ ಮಸೀದಿ ಮೇಲೆ ಕಲ್ಲು ತೂರಾಟ..! ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರಿಂದ ‘ಬಿಸಿ ರೋಡ್ ಚಲೋ’ ಜಾಥಾ

ಕಾರ್ಕಳ:ರೆಂಜಾಳ ಕಾಂಗ್ರೆಸ್‌ ಮಹಿಳಾ ಘಟಕದ ಪದಾಧಿಕಾರಿ ಮಲ್ಲಿಕಾ ಶೆಟ್ಟಿ ಬಿಜೆಪಿಗೆ ಸೇರ್ಪಡೆ