ಕರಾವಳಿಪುತ್ತೂರುಬೆಂಗಳೂರುಸುಳ್ಯ

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ,ಅಧಿಕೃತ ಘೋಷಣೆಯೊಂದೇ ಬಾಕಿ

240

ನ್ಯೂಸ್ ನಾಟೌಟ್ : ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಮೇ 10ರಂದು ನಡೆಯಲಿರುವ ಚುನಾವಣೆಗೆ ತಯಾರಿಗಳು ಭರದಿಂದ ನಡೆಯುತ್ತಿದೆ. ಇದರ ಮಧ್ಯೆ ಪುತ್ತೂರಿನಲ್ಲಿ ಕಾಂಗ್ರೆಸ್ ಟಿಕೇಟ್ ಯಾರಿಗೆ ಸಿಗಬಹುದೆನ್ನುವ ಕುತೂಹಲ ಗರಿಗೆದರಿದೆ.ಸದ್ಯ ಉನ್ನತ ಮೂಲಗಳಿಂದ ಬಂದಿರುವ ಮಾಹಿತಿ ಪ್ರಕಾರ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ ಅವರ ಹೆಸರು ಬಹುತೇಕ ಅಂತಿಮಗೊಂಡಿದೆ ಎಂದು ತಿಳಿದು ಬಂದಿದೆ.ಆದರೆ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಈಗಾಗಲೇ 2 ಹಂತದಲ್ಲಿ ಬಿಡುಗಡೆಗೊಳಿಸಿದ್ದು, ಪುತ್ತೂರು ಸೇರಿದಂತೆ ವಿವಿಧ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಿಸಲು ಕಾಂಗ್ರೆಸ್ ಬಾಕಿ ಇರಿಸಿಕೊಂಡಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮತ್ತು ಅಶೋಕ್ ಕುಮಾರ್ ರೈಯವರ ಹೆಸರು ಕೇಳಿ ಬಂದಿತ್ತು. ಇದೀಗ ಅಶೋಕ್ ಕುಮಾರ್ ರೈಯವರ ಹೆಸರನ್ನು ಅಂತಿಮಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

See also  'ಯುವ' ಸಿನಿಮಾ ಬಿಡುಗಡೆಯಲ್ಲಿ ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ ಭಾಗಿ, ಡಾ. ರಾಜ್ ಕುಮಾರ್ ಕುಟುಂಬಕ್ಕೂ ಕೆವಿಜಿ ಕುಟುಂಬಕ್ಕೂ ಇರುವ ನಂಟೇನು..?
  Ad Widget   Ad Widget   Ad Widget   Ad Widget   Ad Widget   Ad Widget   Ad Widget