ಕ್ರೈಂದೇಶ-ವಿದೇಶರಾಜ್ಯವೈರಲ್ ನ್ಯೂಸ್

ಅರ್ಜುನನ ಬಳಿಕ ಮತ್ತೊಂದು ದಸರಾ ಆನೆ ಅಶ್ವತ್ಥಾಮ ಸಾವು..! ಆಹಾರ ಅರಸಿ ಕಾಡಿಗೆ ತೆರಳಿದ್ದ ವೇಳೆ ದುರ್ಘಟನೆ..!

ನ್ಯೂಸ್ ನಾಟೌಟ್: ಕರ್ನಾಟಕದ ದಸರಾ ಆನೆ ಅರ್ಜುನ ಸಾವಿನ ಬಳಿಕ ಮತ್ತೊಂದು ದಸರಾ ಆನೆ ಅಶ್ವತ್ಥಾಮ ವಿದ್ಯುತ್ ತಗುಲಿ ಸಾವನ್ನಪ್ಪಿದೆ ಎಂದು ವರದಿ ತಿಳಿಸಿದೆ. ಎರಡು ಬಾರಿ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ 38 ವರ್ಷದ ‘ಅಶ್ವತ್ಥಾಮ’ ಆನೆಯು ಮೈಸೂರಿನಲ್ಲಿ ಸೋಲಾರ್ ಬೇಲಿಯ ವಿದ್ಯುತ್ ಪ್ರವಹಿಸಿ ಮಂಗಳವಾರ(ಜೂ.11) ಮೃತಪಟ್ಟಿದೆ ಎನ್ನಲಾಗಿದೆ.

ಮೈಸೂರು ಜಿಲ್ಲೆಯ ಹುಣಸೂರು- ಪಿರಿಯಾಪಟ್ಟಣ ತಾಲ್ಲೂಕಿನ ಗಡಿ ಭಾಗದ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಆನೆಯು ಆಹಾರ ಅರಸಿ ಕಾಡಿಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಸೋಲಾರ್ ಬೇಲಿ ಮೇಲೆ ವಿದ್ಯುತ್ ತಂತಿಯು ಬಿದ್ದಿದ್ದರಿಂದ ವಿದ್ಯುತ್ ಆಘಾತದಿಂದ ಅಶ್ವತ್ಥಾಮ ಮೃತಪಟ್ಟಿದೆ ಎಂದು ‌ ಹೇಳಲಾಗಿದೆ. 2017ರಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಈ ಅಶ್ವತ್ಥಾಮ ಆನೆಯನ್ನು ಸೆರೆ ಹಿಡಿಯಲಾಗಿತ್ತು. 2021ರ ದಸರಾಗೆ ಕರೆತರಲಾಗಿತ್ತು.

Click 👇

https://newsnotout.com/2024/06/mangaluru-daiva-temple-kannada-news-n
https://newsnotout.com/2024/06/lawyer-kannada-news-darshan-thoogudeepa-to-court
https://newsnotout.com/2024/06/challenging-star-darshan-arrested-in-process
https://newsnotout.com/2024/06/bike-father-sister-and-son-conflict-kannada-news

Related posts

ಕಾಂಗ್ರೆಸ್ ಅಭ್ಯರ್ಥಿ ಪ್ರಚಾರದ ವೇಳೆ ಬಾಡೂಟ, ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ನಾನ್‍ ವೆಜ್ ಊಟ ವಶಕ್ಕೆ ..! ಚೆಲ್ಲಿದ ಊಟವನ್ನೇ ತಿಂದ ಕೆಲವರು!

ಕೊಡಗು: ಪತ್ನಿಗೆ ಗುಂಡಿಟ್ಟು ಹತ್ಯೆಗೈದ ಪಾಪಿ ಪತಿ..! ಬೆಚ್ಚಿ ಬೀಳಿಸುವ ಭಯಾನಕ ಘಟನೆಗೆ ಕಾರಣವೇನು?

ದರ್ಶನ್ ಪ್ರಕರಣ: ರೇಣುಕಾಸ್ವಾಮಿ ಕೊಲೆ ಸಂಬಂಧ ಸೋನು ಗೌಡಗೆ ಪೊಲೀಸ್‌ ನೋಟಿಸ್‌..! ಈ ಬಗ್ಗೆ ಸೋನು ಹೇಳಿದ್ದೇನು..?