ಕರಾವಳಿಪುತ್ತೂರು

ಪುತ್ತೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಆಪ್ತನ ಮೇಲೆ ದಾಳಿ, ಡಸ್ಟರ್ ಕಾರಿನಲ್ಲಿ ಬಂದು ತಂಡದಿಂದ ಕೃತ್ಯ

232

ನ್ಯೂಸ್‌ ನಾಟೌಟ್‌: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಪ್ತ ಪಾಂಬಾರು ಪ್ರದೀಪ್ ರೈ ಮೇಲೆ ಇಬ್ಬರು ಮಾರಣಾಂತಿಕ ಹಲ್ಲೆಗೈದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಪ್ರದೀಪ್ ರೈ ಅವರು ಬೊಳುವಾರು ಆಸ್ಪತ್ರೆಯ ಬಳಿ ಕಾರನ್ನು ಪಾರ್ಕ್ ಮಾಡುತ್ತಿದ್ದ ವೇಳೆ ಡಸ್ಟರ್ ಕಾರಿನಲ್ಲಿ ಬಂದ ತಂಡವೊಂದು ಅವರಿಗೆ ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಅಷ್ಟೇ ಅಲ್ಲದೇ ಕೈಯಲ್ಲಿದ್ದ ಉಂಗುರ ಹಾಗೂ ಸುಮಾರು 9 ಸಾವಿರ ನಗದನ್ನು ದೋಚಿ ಪರಾರಿಯಾಗಿದ್ದಾರೆ ಎಂಬ ಮಾಹಿತಿ ಇದೆ. ಪ್ರದೀಪ್ ರೈ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರದೀಪ್ ರೈ ವಿಧಾನಸಭಾ ಚುನಾವಣೆ ವೇಳೆ ಕೊಡಗು ಜಿಲ್ಲೆ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿದ್ದರು. ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವಲ್ಲಿ ಯಶಸ್ವಿಯಾಗಿದ್ದರು. ಅಲ್ಲದೇ ಕೊಡಗಿನಲ್ಲಿ ಕಾಂಗ್ರೆಸ್‌ನ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿಯೂ ಯಶಸ್ವಿಯಾಗಿದ್ದರು.

See also  ಸುಳ್ಯ: ಮನೆಯಲ್ಲಿ ಯಾರೂ ಇಲ್ಲದ ವೇಳೆ ದಾರುಣ ಘಟನೆ ,ರಬ್ಬರ್ ಟ್ಯಾಪಿಂಗ್ ಮಾಡುತ್ತಾ ಜೀವನ ಸಾಗಿಸುತ್ತಿದ್ದ ದಂಪತಿ ಆತ್ಮಹತ್ಯೆ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget