ಬೆಂಗಳೂರು

ಯುವತಿಯನ್ನು ಬೈಕ್‌ನಲ್ಲಿ ಡ್ರಾಪ್ ಮಾಡಿದ ಹಿಂದೂ ಯುವಕ,ಗುಂಪಿನಿಂದ ಏಕಾಏಕಿ ಹಲ್ಲೆ

300

ನ್ಯೂಸ್ ನಾಟೌಟ್ : ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ.ಮುಸ್ಲಿಂ ಯುವತಿಯನ್ನು ಬೈಕಿನಲ್ಲಿ ಡ್ರಾಪ್ ಮಾಡಿದ ಎಂಬ ಕಾರಣಕ್ಕೆ ಈ ಘಟನೆ ನಡೆದಿದೆ.

ಇವರಿಬ್ಬರೂ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು ಎಂದು ತಿಳಿದು ಬಂದಿದೆ.ಭದ್ರಾವತಿಯ ವಿಶ್ವೇಶ್ವರಯ್ಯ ನಗರದ ಹಿಂದೂ ಯುವಕ ಹಾಗೂ ಖಲಂದರ್ ನಗರದ ಮುಸ್ಲಿಂ ಯುವತಿ ಎನ್ನಲಾಗಿದ್ದು,ಮುಸ್ಲಿಂ ವಿದ್ಯಾರ್ಥಿನಿಯ ಸಹೋದರಿಗೆ ಅಪಘಾತ ಸಂಭವಿಸಿ ಗಾಯಗೊಂಡಿದ್ದ ವಿಷಯ ತಿಳಿದ ನಂತರ ಆಕೆ ತನ್ನ ಸಹಪಾಠಿ ಹಿಂದೂ ಯುವಕನ ಬೈಕ್‌ನಲ್ಲಿ ತನ್ನ ಮನೆಗೆ ಡ್ರಾಪ್ ಪಡೆದಿದ್ದಳು ಎಂಬ ಮಾಹಿತಿಯಿದೆ.

ಡ್ರಾಪ್ ನೀಡಿ ವಾಪಸ್ಸಾಗುತ್ತಿದ್ದ ವೇಳೆ ಝಂಡಾಕಟ್ಟೆ ಬಳಿ ಮುಸ್ಲಿಂ ಯುವಕರ ಗುಂಪು ಹಿಂದೂ ಯುವಕನನ್ನು ಅಡ್ಡ ಹಾಕಿದೆ. ನಿನ್ನ ಹೆಸರೇನು ಎಂದು ಪ್ರಶ್ನೆ ಮಾಡಿದೆ. ಆತ ಹೆಸರು ಹೇಳುತ್ತಿದ್ದ ಹಾಗೆಯೇ ಹತ್ತಾರು ಪ್ರಶ್ನೆ ಮಾಡಿ ಹಿಗ್ಗಾಮುಗ್ಗ ಹಲ್ಲೆ ನಡೆಸಿದ್ದಾರೆ.ಈ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಹಿಂದು ಯುವಕನ ಇಬ್ಬರು ಸ್ನೇಹಿತರ ಮೇಲೆಯೂ ಗುಂಪು ಹಲ್ಲೆ ನಡೆಸಿದೆ ಎಂದು ತಿಳಿದು ಬಂದಿದೆ. ಈ ವೇಳೆ ಸ್ಥಳೀಯರು ಜಮಾಯಿಸಿದ್ದು, ಗಲಾಟೆ ಬಿಡಿಸಿ ಕಳುಹಿಸಿದ್ದಾರೆ. ಗಲಾಟೆ ಬಿಡಿಸಿದ ಸ್ಥಳೀಯರಿಗೂ ಮುಸ್ಲಿಂ ಯುವಕರ ಗುಂಪು ಬೆದರಿಕೆ ಹಾಕಿದೆ ಎನ್ನಲಾಗಿದ್ದು, ಘಟನೆ ಕುರಿತು ಹಳೆನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://www.youtube.com/watch?v=2T3tcZg5Wm8

See also  ಆತ್ಮಹತ್ಯೆಗೆ ಶರಣಾದ 'ಬ್ರಹ್ಮಗಂಟು' ಸೀರಿಯಲ್‌ ನಟಿ ಶೋಭಿತಾ..! ಆತ್ಮಹತ್ಯೆಗೂ ಮುನ್ನ ಫೋಟೋವೊಂದನ್ನು ಶೇರ್‌ ಮಾಡಿದ್ದ ನಟಿ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget