ಕರಾವಳಿಸುಳ್ಯ

ಸುಳ್ಯ: ಕ್ಷುಲ್ಲಕ ವಿಚಾರಕ್ಕೆ ಜಗಳ,ವ್ಯಕ್ತಿಗೆ ತಲವಾರಿನಿಂದ ಹಲ್ಲೆಗೆ ಯತ್ನ

ನ್ಯೂಸ್ ನಾಟೌಟ್ : ಇಬ್ಬರು ವ್ಯಕ್ತಿಗಳ ಮಧ್ಯೆ ಕ್ಷುಲ್ಲಕ ವಿಷಯಕ್ಕೆ ಮಾತಿನ ಚಕಮಕಿ ನಡೆದಿದ್ದು ವ್ಯಕ್ತಿಯೊಬ್ಬ ತಲವಾರು ಝಳಪಿಸಿ ಹಲ್ಲೆಗೆ ಯತ್ನಿಸಿದ ಘಟನೆ ಸುಳ್ಯದ ಐವರ್ನಾಡಿನಿಂದ ವರದಿಯಾಗಿದೆ. ಮಾತಿನ ಚಕಮಕಿ ನಡೆಯುತ್ತಿದ್ದಂತೆಯೇ ವ್ಯಕ್ತಿ ಓಡಿ ಹೋಗಿ ಕಾರಿನಿಂದ ತಲವಾರು ತೆಗೆದು ಹಲ್ಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಶ್ರೀ ಪಂಚಲಿಂಗೇಶ್ವರ ಪೆಟ್ರೋಲ್ ಪಂಪ್ ಬಳಿ ಇರುವ ನಿಸರ್ಗ ಕಾಂಪ್ಲೆಕ್ಸ್ ನಲ್ಲಿ ವಾಸ್ತವ್ಯವಿರುವ ಪ್ರವೀಣ ಎಂಬವರಿಗೆ ಇನ್ನೋರ್ವ ನಿವಾಸಿ ಧರ್ಮಲಿಂಗಂ ಎಂಬವರೊಂದಿಗೆ ಕ್ಷುಲ್ಲಕ ವಿಚಾರಕ್ಕೆ ಜಗಳವಾಗಿದೆ. ಈ ವೇಳೆ ಪ್ರವೀಣ್ ಅವರು ತಮ್ಮ ವಾಹನದಿಂದ ತಲವಾರು ತೆಗೆದು ಹಲ್ಲೆ ನಡೆಸಲು ಮುಂದಾಗಿದ್ದಾರೆ ಎನ್ನಲಾಗಿದೆ.ಕೂಡಲೇ ಅಲ್ಲಿದ್ದವರು ತಡೆದಿದ್ದಾರೆ. ಈ ಬಗ್ಗೆ ಧರ್ಮಲಿಂಗಂ ರವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Related posts

ಮಾಲ್‌‌‌ ನಲ್ಲಿ ನಿವೃತ್ತ ಶಿಕ್ಷಕನ ಅಸಭ್ಯ ವರ್ತನೆ ಬಗ್ಗೆ ಸಿಕ್ಕ ಮತ್ತಷ್ಟು ಸ್ಪೋಟಕ ಮಾಹಿತಿಗಳೇನು ..? 45 ಸಿಸಿ ಟಿವಿ ದೃಶ್ಯ ಪರಿಶೀಲಿಸಿದ ಪೊಲೀಸರಿಗೆ ಕಾದಿತ್ತು ಶಾಕ್..!

ಖ್ಯಾತ ದೈವ ನರ್ತಕನಿಗೆ ಹೃದಯಾಘಾತ..!ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲೇ ಕೊನೆಯುಸಿರೆಳೆದ ಅಶೋಕ್ ಬಂಗೇರ

ಸುಳ್ಯ:NMC ನೇಚರ್ ಕ್ಲಬ್ ವತಿಯಿಂದ ಸಂಶೋಧನಾ ಪ್ರೇರಣಾ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ,ಪರಿಸರ ಸಂಬಂಧಿತ ಹಲವು ಸಮಸ್ಯೆಗಳನ್ನು ಅಧ್ಯಯನ ನಡೆಸುವ ಬಗ್ಗೆ ಚರ್ಚೆ