Latestಕ್ರೈಂದೇಶ-ವಿದೇಶವಿಡಿಯೋವೈರಲ್ ನ್ಯೂಸ್

ಔರಂಗಜೇಬನ ಸಮಾಧಿ ಕೆಡವಲು ಹಿಂದೂ ಸಂಘಟನೆಗಳಿಂದ ಹೋರಾಟ..! ಸಮಾಧಿಯ ನಿರ್ವಹಣೆಗೆ ಹಣಕಾಸಿನ ನೆರವು ನಿಲ್ಲಿಸುವಂತೆ ಸರ್ಕಾರ ಆಗ್ರಹ..! ಏನಿದು ವಿವಾದ..?

481
Spread the love

ನ್ಯೂಸ್ ನಾಟೌಟ್: ಮರಾಠ ದೊರೆ ಛತ್ರಪತಿ ಶಿವಾಜಿ ಮಹಾರಾಜರ ಜನ್ಮ ದಿನಾಚರಣೆಯ ಬೆನ್ನಲ್ಲೇ ಮೊಘಲ್ ಚಕ್ರವರ್ತಿ ಔರಂಗಜೇಬನ ಸಮಾಧಿಯನ್ನು ಕೆಡವಬೇಕೆಂದು ಒತ್ತಾಯಿಸಿ ಹಿಂದೂಪರ ಸಂಘಟನೆಗಳು ಆರಂಭಿಸಿರುವ ಅಭಿಯಾನ ಆರಂಭಿಸಿವೆ.

ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳ ನೇತೃತ್ವದ ಬಲಪಂಥೀಯ ಸಂಘಟನೆಗಳು ಮೊಘಲ್ ಚಕ್ರವರ್ತಿ ಔರಂಗಜೇಬನ ಸಮಾಧಿಯನ್ನು ಕೆಡವಬೇಕೆಂದು ಒತ್ತಾಯಿಸಿ ‘ಬಾಬರಿ ಮಸೀದಿ ಮಾದರಿಯ’ ಆಂದೋಲನವನ್ನು ಪ್ರಾರಂಭಿಸಿವೆ.

ಇದಕ್ಕೆ ಇಂಬು ನೀಡುವಂತೆ ಆಡಳಿತರೂಢ ಬಿಜೆಪಿ ನಾಯಕರು ಮತ್ತು ಶಿವಸೇನೆ ನಾಯಕ ಹಾಗೂ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸೇರಿದಂತೆ ಹಲವಾರು ನಾಯಕರು ಈ ಬೇಡಿಕೆಯನ್ನು ಬೆಂಬಲಿಸಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿಯೂ ಈ ವಿಷಯ ಭಾರಿ ಚರ್ಚೆಗೆ ಗ್ರಾಸವಾಗಿತ್ತು.

ಈಗಾಗಲೇ ಹಿಂದೂಪರ ಸಂಘಟನೆಗಳು ಔರಂಗಜೇಬ್ ಸಮಾಧಿಯನ್ನು ಸರ್ಕಾರ ಕೆಡವಬೇಕು.. ಇಲ್ಲವಾದಲ್ಲಿ ಆ ಕೆಲಸವನ್ನು ಕರಸೇವಕರು ಮಾಡುತ್ತಾರೆ ಎಂದು ಎಚ್ಚರಿಕೆ ನೀಡಿದೆ. ಅಲ್ಲದೆ ಈ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಗಡುವು ಕೂಡ ನೀಡಿದ್ದಾರೆ. ಹಿಂದೂ ಜನಜಾಗೃತಿ ಸಮಿತಿ (HJS) ಸಮಾಧಿಯ ನಿರ್ವಹಣೆಗೆ ಹಣಕಾಸಿನ ನೆರವು ನಿಲ್ಲಿಸುವಂತೆ ಸರ್ಕಾರವನ್ನು ಆಗ್ರಹಿಸಿದೆ.

ಮಹಾರಾಷ್ಟ್ರ ಮತ್ತು ಗೋವಾದ ಉಸ್ತುವಾರಿ ವಿಎಚ್‌ಪಿ ಕಾರ್ಯದರ್ಶಿ ಗೋವಿಂದ್ ಶೆಂಡೆ, ಸಾರ್ವಜನಿಕ ಜಾಗೃತಿ ಉಪಕ್ರಮಗಳೊಂದಿಗೆ ಪ್ರಾರಂಭಿಸಿ ಈ ಆಂದೋಲನವನ್ನು ಹಂತ ಹಂತವಾಗಿ ನಡೆಸಲಾಗುವುದು.

“ಇದರಲ್ಲಿ ಪ್ರತಿಭಟನೆಗಳು, ಜ್ಞಾಪನಾ ಪತ್ರಗಳು, ಪ್ರತಿಕೃತಿ ದಹನ, ಸಭೆಗಳು ಮತ್ತು ಜಾಗೃತಿ ಕಾರ್ಯಕ್ರಮಗಳು ಸೇರಿವೆ. ಅಂತಿಮ ಹಂತವೆಂದರೆ ಚಲೋ ಸಂಭಾಜಿನಗರ ಮೆರವಣಿಗೆ” ಎಂದು ಸಂಘಟನೆಗಳು ಹೇಳಿಕೊಂಡಿವೆ.

See also  ಸುಬ್ರಹ್ಮಣ್ಯ: ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು ಬ್ಲ್ಯಾಕ್ ಮೇಲ್..! ನಗ್ನ ವಿಡಿಯೋ ಚಿತ್ರೀಕರಿಸಿ ಲಕ್ಷ..ಲಕ್ಷಕ್ಕೆ ಬೇಡಿಕೆ ಇಟ್ಟವ ಸಿಕ್ಕಿಬಿದ್ದಿದ್ದು ಹೇಗೆ..?
  Ad Widget   Ad Widget   Ad Widget   Ad Widget   Ad Widget   Ad Widget