ಕ್ರೈಂದೇಶ-ಪ್ರಪಂಚ

ಹೊತ್ತಿ ಉರಿದ ಆಟೋರಿಕ್ಷಾ ,ಮಹಿಳೆ ಸಜೀವ ದಹನ

ನ್ಯೂಸ್ ನಾಟೌಟ್ : ಆಟೋ ರಿಕ್ಷಾಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಆಟೋದಲ್ಲೇ ಮಹಿಳೆಯೊಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ.ಮಹಾರಾಷ್ಟ್ರದ ಥಾಣೆ ನಗರದಲ್ಲಿ ಈ ದುರಂತ ಸಂಭವಿಸಿದ್ದು, ಮಹಿಳೆ ಸುಟ್ಟು ಕರಕಲಾಗಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಆಟೋ ರಸ್ತೆಯ ವಿಭಜಕಕ್ಕೆ ಹೋಗಿ ಢಿಕ್ಕಿ ಹೊಡೆದಿದೆ. ಪರಿಣಾಮ ಆಟೋ ರಿಕ್ಷಾಕ್ಕೆ ಬೆಂಕಿ ಹೊತ್ತಿಕೊಂಡಿದೆ.ಮಹಿಳೆ ಆಟೋದಲ್ಲೇ ಇದ್ದ ಕಾರಣ ಸಜೀವ ದಹನವಾಗಿದ್ದಾರೆ.ಇನ್ನು ಸಂಪೂರ್ಣ ಸುಟ್ಟು ಹೋದ ಕಾರಣ ಮಹಿಳೆಯ ಗುರುತು ಇದುವರೆಗೆ ಪತ್ತೆಯಾಗಿಲ್ಲ ಎಂದು ತಿಲೀದು ಬಂದಿದೆ. ಘಟನೆಯಲ್ಲಿ ಆಟೋ ಚಾಲಕ ರಾಜೇಶ್‌ ಕುಮಾರ್‌ (45) ಅವರಿಗೆ ಸುಟ್ಟ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

Related posts

ರಶ್ಮಿಕಾ ಮಂದಣ್ಣ ಡೀಪ್‌ಫೇಕ್ ವಿಡಿಯೋದ ಬಗ್ಗೆ ರಕ್ಷಿತ್ ಶೆಟ್ಟಿ ಹೇಳಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ಕೇವಲ1000ಕ್ಕೆ ಬೆಟ್ಟ್ ಕಟ್ಟಿ ಮೊಮೊಸ್ ತಿಂದ ಯುವಕ ಸ್ಥಳದಲ್ಲೇ ಕೊನೆಯುಸಿರೆಳೆದ..! ಅಷ್ಟಕ್ಕೂ 23ರ ಯುವಕನಿಗೆ ಆಗಿದ್ದೇನು?

ದೇವಾಲಯದೊಳಗಿದ್ದ ಆಂಜನೇಯ ಮೂರ್ತಿಯನ್ನು ವಿರೂಪಗೊಳಿಸಿ ವಿಕೃತಿ..! ರಾತ್ರೋರಾತ್ರಿ ದೇಗುಲದ ಬೀಗ ಮುರಿದು ಒಳ ನುಗ್ಗಿದ ದುಷ್ಕರ್ಮಿಗಳು..!