ದೇಶ-ವಿದೇಶವೈರಲ್ ನ್ಯೂಸ್

ಅಯೋಧ್ಯೆ ರಾಮಮಂದಿರದಲ್ಲಿ ಮೊದಲ ದೀಪಾವಳಿಗೆ 28 ಲಕ್ಷ ದೀಪ ಬೆಳಗಿಸಲು ಸರ್ಕಾರದ ಸಿದ್ಧತೆ, 30,000 ಕ್ಕೂ ಹೆಚ್ಚು ಸ್ವಯಂಸೇವಕರು ಮತ್ತು 2,000 ಕ್ಕೂ ಹೆಚ್ಚು ಮೇಲ್ವಿಚಾರಕರಿಂದ ವಿಶ್ವ ದಾಖಲೆಗೆ ತಯಾರಿ

ನ್ಯೂಸ್ ನಾಟೌಟ್: ಅಯೋಧ್ಯೆಯ ರಾಮ ಮಂದಿರದಲ್ಲಿ ಮೊದಲ ದೀಪಾವಳಿಯನ್ನುಅದ್ದೂರಿಯಾಗಿ ಆಚರಿಸಲು ಉತ್ತರ ಪ್ರದೇಶದ ಸರ್ಕಾರ ಸಿದ್ಧತೆ ಆರಂಭಿಸಿದೆ.
ದೀಪಾವಳಿಯಂದು ಸರಯೂ ನದಿಯ ದಡದಲ್ಲಿ 28 ಲಕ್ಷ ದೀಪಗಳನ್ನು ಬೆಳಗಿಸುವ ಮೂಲಕ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸುವ ಗುರಿಯನ್ನು ಸರ್ಕಾರ ಹೊಂದಿದೆ.

ಹಬ್ಬದ ದಿನದಂದು ವಿಶೇಷ ಪರಿಸರ ಸ್ನೇಹಿ ದೀಪಗಳು ರಾಮ ಮಂದಿರವನ್ನು ಬೆಳಗಿಸಲಿವೆ. ದೇವಾಲಯದ ಕಟ್ಟೆಗಳು ಹಾಗೂ ಕೆತ್ತನೆಯ ಮೇಲೆ ಕಲೆಗಳು ಮತ್ತು ಮಸಿ ಪರಿಣಾಮ ಬೀರುವುದನ್ನು ತಡೆಯಲು ವಿಶೇಷ ರೀತಿಯ ದೀಪಗಳನ್ನು ವಿನ್ಯಾಸಗೊಳಿಸಲಾಗಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಈ ದೀಪಾವಳಿಯಂದು 2,000 ಕ್ಕೂ ಹೆಚ್ಚು ಮೇಲ್ವಿಚಾರಕರು, ಉಸ್ತುವಾರಿಗಳು ಮತ್ತು ಇತರ ಸದಸ್ಯರ ಮಾರ್ಗದರ್ಶನದಲ್ಲಿ 30,000 ಕ್ಕೂ ಹೆಚ್ಚು ಸ್ವಯಂಸೇವಕರು 28 ಲಕ್ಷ ದೀಪಗಳನ್ನು ಸರಯೂ ನದಿಯ ಉದ್ದಕ್ಕೂ 55 ಸಾಲುಗಳಲ್ಲಿ ಅಲಂಕರಿಸಲಿದ್ದಾರೆ ಎಂದು ಸರ್ಕಾರ ತಿಳಿಸಿದೆ.

ದೀಪೋತ್ಸವ ಕಾರ್ಯಕ್ರಮದ ಸಲುವಾಗಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರವು ಅಕ್ಟೋಬರ್ 29 ರಿಂದ ನವೆಂಬರ್ 1 ರ ಮಧ್ಯರಾತ್ರಿಯವರೆಗೆ ದೇವಸ್ಥಾನವನ್ನು ‘ಭವನ ದರ್ಶನ’ಕ್ಕಾಗಿ ತೆರೆದಿಡಲು ನಿರ್ಧರಿಸಲಾಗಿದೆ.

Click

https://newsnotout.com/2024/10/delivery-boys-bike-got-fired-kannada-news-parking-area/
https://newsnotout.com/2024/10/golgappa-food-department-of-karnataka-kannada-news-food/

Related posts

ಏಷ್ಯಾಕಪ್ ಕ್ರಿಕೆಟ್‌ ಮೊದಲೆರಡು ಪಂದ್ಯಗಳಿಂದ ಕನ್ನಡಿಗ ಕೆ.ಎಲ್. ರಾಹುಲ್ ಔಟ್..! ರಾಹುಲ್ ಬದಲಿಗೆ ಯಾರಿಗೆ ಸಿಗುತ್ತೆ ಸ್ಥಾನ..?

ಎಲ್ಲೇ ಇದ್ದರೂ ಕೂಡಲೇ ಸ್ವದೇಶಕ್ಕೆ ಬಾ, ನನ್ನ ತಾಳ್ಮೆ ಪರೀಕ್ಷೆ ಮಾಡಬೇಡ ಎಂದು ಪ್ರಜ್ವಲ್‌ಗೆ ಖಡಕ್ ವಾರ್ನಿಂಗ್ ಕೊಟ್ಟ ಹೆಚ್‌.ಡಿ.ಡಿ..! ಹೆಚ್.ಡಿ.ದೇವೇಗೌಡರು ಹಂಚಿಕೊಂಡ ಪತ್ರದಲ್ಲೇನಿದೆ..?

ಅದ್ಭುತ ಲಾಂಗ್ ಜಂಪ್ ಮಾಡಿದ ಹುಲಿ..! ಇಲ್ಲಿದೆ ಅಪರೂಪದ ವೈರಲ್ ವಿಡಿಯೋ