ಕ್ರೈಂವೈರಲ್ ನ್ಯೂಸ್

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಬಾಂಬ್ ದಾಳಿ ಬೆದರಿಕೆ..! ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ನಂಟಿರೋ ಆತ ಯಾರು..?

248

ನ್ಯೂಸ್ ನಾಟೌಟ್: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ (Ayodhya Ram Mandir) ರಾಮಲಲ್ಲಾನ ಪ್ರಾಣ ಪ್ರತಿಷ್ಠೆಗೆ ದಿನಗಣನೆ ಆರಂಭವಾಗಿದೆ. ಈ ನಡುವೆ ಅಯೋಧ್ಯೆಯ ಶ್ರೀರಾಮ ಮಂದಿರವನ್ನು ಬಾಂಬ್ ದಾಳಿ ಮೂಲಕ ಸ್ಫೋಟಿಸುವ ಸಂದೇಶವುಳ್ಳ ಇ-ಮೇಲ್ ಬಂದಿರುವುದು ಆತಂಕ ಸೃಷ್ಟಿಸಿದೆ.

ಬಾಂಬ್ ದಾಳಿ ಬೆದರಿಕೆ ಸಂದೇಶದ ಇ-ಮೇಲ್​ನಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಎಸ್‌ಟಿಎಫ್ ಎಡಿಜಿ ಅಮಿತಾಬ್ ಯಶ್ ಎಂಬವರ ಬಗ್ಗೆಯೂ ಉಲ್ಲೇಖಿಸಲಾಗಿದೆ ಎಂದು ವರದಿ ತಿಳಿಸಿದೆ.

ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ ವ್ಯಕ್ತಿ, ತನಗೆ ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್‌ಐ ಜೊತೆ ಸಂಬಂಧ ಇದೆ ಎಂದೂ ಹೇಳಿಕೊಂಡಿದ್ದಾನೆ. ಪ್ರಕರಣದ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಉತ್ತರ ಪ್ರದೇಶ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಬಾಂಬ್ ದಾಳಿ ಬೆದರಿಕೆ ಸಂದೇಶವನ್ನು ಭಾರತೀಯ ಕಿಸಾನ್ ಮಂಚ್‌ನ ರಾಷ್ಟ್ರೀಯ ಅಧ್ಯಕ್ಷ ದೇವೇಂದ್ರ ತಿವಾರಿಗೆ ಕಳುಹಿಸಲಾಗಿದೆ. ಮೇಲ್‌ನಲ್ಲಿ ಆಕ್ಷೇಪಾರ್ಹ ಭಾಷೆಯನ್ನು ಬಳಸಲಾಗಿದ್ದು, ಮೇಲ್ ಕಳುಹಿಸಿದವನು ತನ್ನನ್ನು ಜುಬೈರ್ ಹುಸೇನ್ ಖಾನ್ ಎಂದು ಗುರುತಿಸಿಕೊಂಡಿದ್ದಾನೆ ಎನ್ನಲಾಗಿದೆ, ಜೊತೆಗೆ ಐಎಸ್‌ಐ ಜತೆ ಸಂಬಂಧವಿದೆ ಎಂದು ಹೇಳಿಕೊಂಡಿದ್ದಾನೆ ಎನ್ನಲಾಗಿದೆ.

ದೇವೇಂದ್ರ ತಿವಾರಿ ಸಾಮಾಜಿಕ ಮಾಧ್ಯಮ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ದೇವೇಂದ್ರ ತಿವಾರಿ ಆರೋಪಿಸಿದ್ದಾರೆ.

See also  ಸಿಎಂ ಕಚೇರಿಯ 'ಕಚೇರಿ ಟಿಪ್ಪಣಿ' ನಕಲು ಪ್ರಕರಣ..! ಹಲವಾರು ಎಂ.ಎಲ್‌.ಎಗಳ ಬಳಿ ಪಿಎ ಆಗಿದ್ದವ ಅರೆಸ್ಟ್..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget