ಕ್ರೈಂದೇಶ-ಪ್ರಪಂಚದೇಶ-ವಿದೇಶವಿಡಿಯೋವೈರಲ್ ನ್ಯೂಸ್

ಮಹಡಿಯಲ್ಲಿ ಸಿಕ್ಕಿಕೊಂಡಿದ್ದ ಮಗುವಿನ ರಕ್ಷಣೆಯ ಬೆನ್ನಲ್ಲೇ ತಾಯಿ ಆತ್ಮಹತ್ಯೆ..! ಸಾವಿನ ಹಿಂದಿದೆಯಾ ಆ ವೈರಲ್ ವಿಡಿಯೋ ಪ್ರಭಾವ..?

ನ್ಯೂಸ್ ನಾಟೌಟ್: ಕೆಲದಿನಗಳ ಹಿಂದೆ ಪುಟ್ಟ ಕಂದಮ್ಮವೊಂದು ಅಪಾರ್ಟ್‌ ಮೆಂಟ್‌ನ ಬಾಲ್ಕನಿಯಿಂದ ಬಿದ್ದಿದ್ದ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್‌ ಆಗಿತ್ತು, ಮತ್ತು ಆ ಮಗುವನ್ನು ರಕ್ಷಿಸಲಾಗಿತ್ತು. ಇದೀಗ ಆ ಮಗುವಿನ ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.

ಆಕಸ್ಮಿಕವಾಗಿ ತನ್ನ ಕೈಯಿಂದ ಜಾರಿ ಮಗು ಅಪಾರ್ಟ್‌ ಮೆಂಟ್‌ ಬಾಲ್ಕನಿಯಲ್ಲಿ ಬಿದ್ದ ಘಟನೆಯ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ನಿಂದನೆ ವ್ಯಕ್ತವಾಗಿದ್ದರಿಂದ ಮನನೊಂದು ಟೆಕ್ಕಿ ರಮ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಯಮತ್ತೂರಿನ ಕಾರಮಡೈಯಲ್ಲಿರುವ ತವರು ಮನೆಯಲ್ಲಿ ಭಾನುವಾರ(ಮೇ.19) ರಮ್ಯಾ ಸಾವನ್ನಪ್ಪಿರುವುದು ಅಚ್ಚರಿಗೆ ಕಾರಣವಾಗಿದೆ. ತಾಯಿಯ ಕೈಯಿಂದ ಮಗು ಬಿತ್ತೆಂದು ವೈರಲ್ ವಿಡಿಯೋದಲ್ಲಿ ಹಲವರು ತಾಯಿಯನ್ನು ನಿಂದಿಸಿದ್ದರು ಎನ್ನಲಾಗಿದೆ, ಈ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ರಮ್ಯಾ ಚೆನ್ನೈನ ಐಟಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಆಕೆಯ ಪತಿ ವೆಂಕಟೇಶ್ ಕೂಡ ಐಟಿ ಉದ್ಯೋಗಿ ಎನ್ನಲಾಗಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರಮ್ಯಾರನ್ನು ಪೋಷಕರು ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋದರು. ಆದರೆ ಆಕೆ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

Related posts

ಧೋನಿಯ ಅಪ್ಪಟ ಅಭಿಮಾನಿ ಆಗಿದ್ದರೂ ಕಾರ್ಯವೈಖರಿ ಮಾತ್ರ ವಿರಾಟ್ ಕೊಹ್ಲಿ ಥರ ಅಗ್ರೆಸ್ಸಿವ್..!

ಸಾಮಾಜಿಕ ಜಾಲತಾಣದಲ್ಲಿ ಬ್ಲೂ ಟಿಕ್ ಮಾರ್ಕ್ ಕಳೆದುಕೊಂಡ ಪ್ರಜ್ವಲ್ ರೇವಣ್ಣ..! ಇಲ್ಲಿದೆ ಸಂಪೂರ್ಣ ಮಾಹಿತಿ

ಚೀನಾದಲ್ಲಿ ಮತ್ತೊಂದು ಡೆಡ್ಲಿ ವೈರಸ್ ಪತ್ತೆ..! ಕೇಂದ್ರ ಆರೋಗ್ಯ ಇಲಾಖೆ ಭಾರತದಲ್ಲಿ ನೀಡಿದ ಎಚ್ಚರಿಕೆ ಏನು?