ನ್ಯೂಸ್ ನಾಟೌಟ್ : ನಟಿ ಕಿಯಾರಾ ಅಡ್ವಾಣಿ ಹಾಗೂ ಪತಿ ಸಿದ್ದಾರ್ಥ್ ಮಲ್ಹೋತ್ರಾ ಮನೆಯಲ್ಲಿ ಈಗ ಸಂಭ್ರಮ ಮನೆ ಮಾಡಿದೆ. ಈ ದಂಪತಿಗೆ ಇದೀಗ ಹೆಣ್ಣು ಮಗುವಿನ ಜನನವಾಗಿದೆ.ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.
ಕಿಯಾರಾ ಅವರು ಕನ್ನಡದ ‘ಟಾಕ್ಸಿಕ್’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಯಶ್ ನಟನೆಯ ಈ ಚಿತ್ರಕ್ಕೆ ಗೀತು ಮೋಹನ್ ದಾಸ್ ನಿರ್ದೇಶನ ಇದೆ. ಅವರು ಈ ಚಿತ್ರದ ಶೂಟಿಂಗ್ ಮುಗಿಯುವ ಮೊದಲೇ ಪ್ರೆಗ್ನೆನ್ಸಿಗೆ ಪ್ಲ್ಯಾನ್ ಮಾಡಿದ್ದರು. ಅವರು ತಮ್ಮ ಭಾಗದ ಶೂಟಿಂಗ್ ಮುಗಿಸಿಕೊಟ್ಟಿದ್ದಾರೆ. 2023ರ ಫೆಬ್ರವರಿ ತಿಂಗಳಲ್ಲಿ ಇವರು ವಿವಾಹ ಆಗಿದ್ದರು. ಮದುವೆಯಾದ ಸುಮಾರು ಎರಡೂವರೆ ವರ್ಷಗಳ ಬಳಿಕ ಈ ದಂಪತಿ ಸಿಹಿ ಸುದ್ದಿ ನೀಡಿದ್ದಾರೆ.
ನಟಿಗೆ ಆಗಸ್ಟ್‌ನಲ್ಲಿ ಹೆರಿಗೆಯಾಗಬೇಕಿತ್ತು, ಆದರೆ ಮಗು ಬೇಗನೆ ಜನಿಸಿದೆ. ಕಿಯಾರಾಳನ್ನು ಹೆರಿಗೆಗಾಗಿ ಮುಂಬೈನ ಗಿರ್ಗಾಂವ್ ಪ್ರದೇಶದ ಹೆಚ್‌ಎನ್ ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕಿಯಾರಾ ಅಡ್ವಾಣಿ ಅವರಿಗೆ ಚಿತ್ರರಂಗದಲ್ಲಿ ಈಗಲೂ ಬೇಡಿಕೆ ಇದೆ. ಸದ್ಯ ಅವರು ಮಗು ಜನಿಸಿದ ಬಳಿಕ ಒಂದು ಗ್ಯಾಪ್ ಪಡೆಯಲಿದ್ದಾರೆ. ಜೂನಿಯರ್ ಎನ್ಟಿಆರ್ ಹಾಗೂ ಹೃತಿಕ್ ರೋಷನ್ ನಟನೆಯ ‘ವಾರ್ 2’ ಸಿನಿಮಾದಲ್ಲಿ ಅವರು ನಟಿಸಿದ್ದಾರೆ. ಈ ಚಿತ್ರ ಆಗಸ್ಟ್ 14ರಂದು ತೆರೆಗೆ ಬರಲಿದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.