ನ್ಯೂಸ್ ನಾಟೌಟ್: ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್ ತಗುಲಿ 11 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನಾರಾಯಣಘಟ್ಟದಲ್ಲಿ ಇಂದು(ಜೂ.10) ನಡೆದಿದೆ.
ನಾರಾಯಣಘಟ್ಟ ಗ್ರಾಮದ ತನಿಷ್ಕಾ(11) ಮೃತ ಬಾಲಕಿ ಎಂದು ಗುರುತಿಸಲಾಗಿದೆ. ಶಾಲೆಗೆ ರಜೆ ಇದ್ದ ಕಾರಣ ತನಿಷ್ಕಾ ಮನೆ ಬಳಿಯೇ ಆಟವಾಡುತ್ತಿದ್ದಳು. ವಿದ್ಯುತ್ ಕಂಬದ ಬಳಿ ಆಟವಾಡುತ್ತಿದ್ದಾಗ ಕರೆಂಟ್ ಶಾಕ್ ತಗುಲಿದೆ.
ವಿದ್ಯುತ್ ಶಾಕ್ ನಿಂದ ಗಾಯಗೊಂಡಿದ್ದ ತನಿಷ್ಕಾಳನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದ್ರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಗೂಗಲ್ ಮ್ಯಾಪ್ ನಂಬಿ ಫ್ಲೈಓವರ್ ಮೇಲೆ ಅಪಾಯಕ್ಕೆ ಸಿಲುಕಿದ ಕಾರು..! ಪ್ರಾಣಾಪಾಯದಿಂದ ಪಾರಾಗಿದ್ದೇ ಪವಾಡ..!