ಕ್ರೈಂ

ಮಂಗಳೂರಿನಲ್ಲಿ ಎರಡು ವರ್ಷದ ಹಸುಗೂಸಿನ ಮೇಲೆ ಲೈಂಗಿಕ ದೌರ್ಜನ್ಯ..!

ಮಂಗಳೂರು: ನಗರದ ಹೊಯ್ಗೆ ಬಜಾರ್ ಬಳಿ ಒಣ ಮೀನು ಸಂಸ್ಕರಣಾ ಘಟಕದಲ್ಲಿ ಕೆಲಸ ಮಾಡುತ್ತಿರುವ ಬಿಹಾರ ಮೂಲದ ದಂಪತಿಯ 2 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಕೊಲೆಗೆ ಯತ್ನಿಸಿದ ಆರೋಪದ ಮೇಲೆ ಬಿಹಾರದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬಿಹಾರ ಮೂಲದ ಚಂದನ್ ಎಂದು ಗುರುತಿಸಲಾಗಿದೆ. ಹಸುಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ ಬಳಿಕ ಮಗುವನ್ನು ಉಪ್ಪು ತುಂಬಿದ ನೀರಿನ ಟ್ಯಾಂಕ್ ನಲ್ಲಿ ಮುಳುಗಿಸಿ ಕೊಲೆ ಮಾಡುವ ಪ್ರಯತ್ನ ನಡೆಸಲಾಗಿದೆ. ಸದ್ಯ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Related posts

ಸುಳ್ಯದಲ್ಲಿ ತಂಬಾಕು, ಗುಟ್ಕಾ ಮಾರಾಟ ವಿರುದ್ಧ ಮಿಂಚಿನ ಕಾರ್ಯಾಚರಣೆ

ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಗೆ ಅಭಿನಂದಿಸಿ ಹಾಕಿದ್ದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು..! ಮಂಗಳೂರಿನ ಉಳ್ಳಾಲದಲ್ಲಿ ನಡೆದ ಕೃತ್ಯ

ಹೈದರಾಬಾದ್ : ಬಸ್-ಬೈಕ್ ಭೀಕರ ಅಪಘಾತ, ಬಂಟ್ವಾಳದ ಯುವಕ ಸಾವು