ಕರಾವಳಿ

ಬದಿಯಡ್ಕ: ಸತ್ತ ಹೆಣ ಉಸಿರಾಡಿದಾಗ, ಶವ ತರುತ್ತಿದ್ದ ಆಂಬುಲೆನ್ಸ್ ನಲ್ಲಿ ನಡೆಯಿತು ಪವಾಡ..!

356
Spread the love

ಮಂಗಳೂರು : ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆಂದು ಬಿಟ್ಟುಕೊಟ್ಟಿದ್ದ ಬದಿಯಡ್ಕದ ವ್ಯಕ್ತಿಯು ಮಾರ್ಗಮಧ್ಯೆ ಜೀವಂತವಾಗಿ ಉಸಿರಾಡಿದ ಘಟನೆ ಇಂದು ನಡೆದಿದೆ.

ಬದಿಯಡ್ಕದ ಕೂಲಿ ಕಾಮಿರ್ಕ ಗುರುವ (60) ಎಂಬವರನ್ನು ಅಸೌಖ್ಯದ ಹಿನ್ನೆಲೆ ಸೋಮವಾರದಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮಂಗಳವಾರ ತಪಾಸಣೆ ನಡೆಸಿದ ವೈದ್ಯರು, ರೋಗಿ ಆಕ್ಸಿಜನ್​ ಸಹಾಯದಿಂದ ಮಾತ್ರ ಉಸಿರಾಡುತ್ತಿದ್ದು, ಆಕ್ಸಿಜನ್ ಇಲ್ಲದೇ ಹೋದರೆ ಪ್ರಾಣ ಹೋಗುತ್ತದೆ ಎಂದು ಹೇಳಿದ್ದರು. ಅದರಂತೆ ಆಕ್ಸಿಜನ್​ ತೆರವುಗೊಳಿಸಲಾಗಿತ್ತು. ಬಳಿಕ ರೋಗಿಯ ಸಂಬಂಧಿಕರ ಮನೆಗೆ ಫೋನ್​ ಮಾಡಿ, ಅಂತ್ಯಸಂಸ್ಕಾರಕ್ಕೆ ತಯಾರಿ ಮಾಡುವಂತೆ ಸೂಚಿಸಿದ್ದರು.

ಬಳಿಕ ಮಂಗಳೂರು ಆಸ್ಪತ್ರೆಯಿಂದ ಮೃತದೇಹ ಕೊಂಡೊಯ್ಯುತ್ತಿದ್ದ ವೇಳೆ ಉಪ್ಪಳ ತಲುಪುತ್ತಿದ್ದಂತೆಯೇ ಗುರುವ ಅವರ ದೇಹದಲ್ಲಿ ಚಲನೆ ಕಂಡುಬಂದಿದ್ದು, ಉಸಿರಾಡಲು ಆರಂಭಿಸಿದ್ದರು. ತಕ್ಷಣವೇ ರೋಗಿಯನ್ನು ಬದಿಯಡ್ಕದ ಕ್ಲಿನಿಕ್​ಗೆ ಕರೆದೊಯ್ದಿದ್ದು ಗುರುವ ಜೀವಂತವಾಗಿ ಇದ್ದಾರೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ. ಬಳಿಕ ಅಲ್ಲಿಂದ ಕಾಸರಗೋಡಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.

See also  ಕೆ. ವಿ. ಜಿ. ಅಮರಜ್ಯೋತಿ ಪಿಯು ಕಾಲೇಜಿನ ಆನ್‌ಲೈನ್ ಸ್ಕಾಲರ್‌ಶಿಪ್ ಪರೀಕ್ಷೆ ಫಲಿತಾಂಶ ಪ್ರಕಟ
  Ad Widget   Ad Widget   Ad Widget   Ad Widget   Ad Widget   Ad Widget