Latestಕ್ರೈಂರಾಜ್ಯವೈರಲ್ ನ್ಯೂಸ್ಸಿನಿಮಾ

ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಏಪ್ರಿಲ್ 22ಕ್ಕೆ ಮುಂದೂಡಿಕೆ..! 7 ಆರೋಪಿಗಳಿಗೆ ತಾತ್ಕಾಲಿಕ ರಿಲೀಫ್..!

331

ನ್ಯೂಸ್‌ ನಾಟೌಟ್: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಈಗಾಗಲೇ ಜಾಮೀನು ದೊರೆತಿದೆ. ರಾಜ್ಯ ಹೈಕೋರ್ಟ್ (High Court) ಎಲ್ಲ ಆರೋಪಿಗಳಿಗೂ ಜಾಮೀನು ನೀಡಿದೆ. ಕೆಲ ಆರೋಪಿಗಳಿಗೆ ಕೆಳಹಂತದ ನ್ಯಾಯಾಲಯದಲ್ಲಿಯೇ ಜಾಮೀನು ದೊರೆತಿತ್ತು. ಇದೀಗ ರಾಜ್ಯ ಪೊಲೀಸ್ ಇಲಾಖೆಯು ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಕೆಲ ಆರೋಪಿಗಳ ಜಾಮೀನು ರದ್ದು ಮಾಡಬೇಕೆಂದು ಕೋರಿ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ಏಪ್ರಿಲ್ 22ಕ್ಕೆ ಮುಂದೂಡಲ್ಪಟ್ಟಿದೆ.

ನಟ ದರ್ಶನ್ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿತ್ತು. ಪ್ರಕರಣದ ವಿಚಾರಣೆ ಇಂದು ಸುಪ್ರೀಂಕೋರ್ಟ್​ನಲ್ಲಿ ನಡೆಯಿತು. ರಾಜ್ಯದ ಪರವಾಗಿ ವಕೀಲ ಸಿದ್ಧಾರ್ಥ್ ಲೂಥ್ರಾ ಅವರು ಅರ್ಜಿಯ ಉಲ್ಲೇಖ ಮಾಡಿದರು. ಬಳಿಕ ನ್ಯಾಯಮೂರ್ತಿಗಳು ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 22ಕ್ಕೆ ಮುಂದೂಡಿದರು. ಮುಂದಿನ ವಿಚಾರಣೆ ಏಪ್ರಿಲ್ 22ಕ್ಕೆ ನಡೆಯಲಿದ್ದು, ಸುಪ್ರೀಂಕೋರ್ಟ್​ನಲ್ಲಿಯೂ ದರ್ಶನ್ ಪರವಾಗಿ ವಕೀಲ ನಾಗೇಶ್ ವಕಾಲತ್ತು ವಹಿಸುವ ಸಾಧ್ಯತೆ ಇದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಡಿಸೆಂಬರ್ ತಿಂಗಳಲ್ಲಿ ದರ್ಶನ್, ಪವಿತ್ರಾ ಸೇರಿದಂತೆ ಹಲವು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು. ಅದಕ್ಕೂ ಮುನ್ನ ನಟ ದರ್ಶನ್ ಬೆನ್ನು ನೋವಿನ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿತ್ತು. ಹೈಕೋರ್ಟ್​, ದರ್ಶನ್ ಹಾಗೂ ಇತರರಿಗೆ ಜಾಮೀನು ನೀಡಿದ ಬಳಿಕ ರಾಜ್ಯ ಪೊಲೀಸ್ ಇಲಾಖೆ ಗೃಹ ಇಲಾಖೆಯ ಅನುಮತಿ ಪಡೆದುಕೊಂಡು ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದು, ಜಾಮೀನು ರದ್ದು ಮಾಡುವಂತೆ ಕೋರಿದೆ.

See also  ಮಗನ ಸಾವಿನಲ್ಲೂ ಅಂಧರ ಬಾಳಿಗೆ ಬೆಳಕು ತೋರಿದ ಪೋಷಕರು! ಅಷ್ಟಕ್ಕೂ ಮಗನ ಆಸೆ ಏನಾಗಿತ್ತು?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget