ಕ್ರೈಂ

ಬಜರಂಗ ದಳ ಕಾರ್ಯಕರ್ತನ ಪಾರ್ಥಿವ ಶರೀರದ ಮೆರವಣಿಗೆ: ಕಲ್ಲು ತೂರಾಟ, ಗಾಳಿಯಲ್ಲಿ ಗುಂಡು, ಲಾಠಿಚಾರ್ಚ್

ಶಿವಮೊಗ್ಗ: ನಗರದಲ್ಲಿ ಹತ್ಯೆಯಾದ ಬಜರಂಗ ದಳದ ಕಾರ್ಯಕರ್ತ ಹರ್ಷ ಅವರ ಪಾರ್ಥಿವ ಶರೀರದ ಮೆರವಣಿಗೆ ವೇಳೆ ಹಲವೆಡೆ ಕಲ್ಲು ತೂರಾಟ ನಡೆದು, ಗುಂಪು ಚದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡುಹಾರಿಸಿ, ಲಾಠಿ ಬೀಸಿದರು.

ಸೀಗೆಹಟ್ಟಿಯಿಂದ ಹೊರಟ ಮೆರವಣಿಗೆ ಸಿದ್ದಯ್ಯ ರಸ್ತೆಗೆ ಬರುತ್ತಿದ್ದಂತೆ ಬೇರೆ ಬೀದಿಗಳಿಂದ ಕಲ್ಲುಗಳು ತೂರಿಬಂದವು. ಪ್ರತಿಯಾಗಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಜನರೂ ಕಲ್ಲು ತೂರಿದರು. ಟಯರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಗಾಂಧಿ ಬಜಾರ್ ಮಸೀದಿ ಬಳಿ ಬಂದಾಗ ಉದ್ರಿಕ್ತ ಗುಂಪು ಮಸೀದಿಗಳ ಮೇಲೆ ಕಲ್ಲು ತೂರಾಟ ನಡೆಸಿತು. ಕ್ಷಣ ಮಾತ್ರದಲ್ಲಿ ಹಲವು ಬೀದಿಗಳು ರಣರಂಗದಂತೆ ಭಾಸವಾದವು. ಹೆಚ್ಚಿನ ಸಂಖ್ಯೆಯಲ್ಲಿದ್ದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪರಿಸ್ಥಿತಿ ಹತೋಟಿಗೆ ತಂದರು.

Related posts

ಪುತ್ತೂರು: ಬಸ್ ನಿಲ್ದಾಣದಲ್ಲಿ ಅಪರಿಚಿತ ಶವ ಪತ್ತೆ

ಗನ್ ತೋರಿಸಿ ಮಹಿಳಾ ಹೆಡ್ ಕಾನ್‌ಸ್ಟೆಬಲ್ ಮೇಲೆ ಅತ್ಯಾಚಾರ..! ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನನ್ನು ಬಂಧಿಸಿದ ಪೊಲೀಸರು..!

ಪೊಲೀಸ್ ಮತ್ತು ಆರೋಪಿಯ ನಡುವೆ ಬೀದಿ ಜಗಳ..! ಇಲ್ಲಿದೆ ವಿಡಿಯೋ