Uncategorized

ಜಗದ್ಗುರು ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 79ನೇ ಜಯಂತ್ಯುತ್ಸವ, ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ

ನ್ಯೂಸ್ ನಾಟೌಟ್: ಭೈರವೈಕ್ಯ ಜಗದ್ಗುರು ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 79ನೇ ಜಯಂತ್ಯುತ್ಸವ ಕಾರ್ಯಕ್ರಮ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಬಿಜಿಎಸ್ ಸಭಾಂಗಣದಲ್ಲಿ ಗುರುವಾರ ನೆರವೇರಿತು. ಕಾರ್ಯಕ್ರಮದಲ್ಲಿ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು.

ಈ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರವರು, ಶಿವಾನಂದ ಆಶ್ರಮದ ಪೀಠಾಧ್ಯಕ್ಷ ಪರಮಾತ್ಮಾನಂದ ಸರಸ್ವತಿ ಮಹಾಸ್ವಾಮೀಜಿ, ಮಾದಾರ ಗುರುಪೀಠದ ಪರಮಪೂಜ್ಯ ಜಗದ್ಗುರು ಶ್ರೀ ಮಾದಾರಚನ್ನಯ್ಯ ಸ್ವಾಮೀಜಿ, ಕಬೀರಾನಂದ ಆಶ್ರಮದ ಪರಮಪೂಜ್ಯ ಸದ್ಗುರು ಶ್ರೀ ಶಿವಲಿಂಗಾನಂದ ಸ್ವಾಮೀಜಿ, ಶ್ರೀ ಗೋಸಾಯಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಶ್ರೀ ಮಂಜುನಾಥ ಭಾರತೀ ಸ್ವಾಮೀಜಿ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾಮಠದ ಪೂಜ್ಯಸ್ವಾಮೀಜಿಗಳು, ಮಾಜಿ ಉಪಮುಖ್ಯಮಂತ್ರಿಗಳು ಮತ್ತು ಹಾಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಹಾಲಿ ಶಾಸಕ ಡಾ. ಸಿ ಅಶ್ವಥ್‌ ನಾರಾಯಣ್, ಅಸೋಸಿಯೇಷನ್ ಆಫ್ ಕನ್ನಡ ಕೂಟಸ್ ಆಫ್ ಅಮೆರಿಕಾ ಮತ್ತು ಅಮೆರಿಕದ ಒಕ್ಕಲಿಗರ ಪರಿಷತ್ತಿನ ಸಲಹೆಗಾರ ಡಾ.ಅಮರನಾಥ್ ಗೌಡ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

Related posts

20ರ ಯುವತಿಯನ್ನ ಪ್ರೀತಿಸಿ ಮದುವೆಯಾದದ್ದಕ್ಕೆ 40 ವರ್ಷದ ವ್ಯಕ್ತಿಯ ಬರ್ಬರ ಹತ್ಯೆ..! ಮಹಿಳೆಯರೂ ಸೇರಿದಂತೆ ಯುವತಿಯ ಮನೆಯ 6 ಮಂದಿ ಅರೆಸ್ಟ್‌..!

ಇಚ್ಲಂಪಾಡಿಯಲ್ಲಿ ನೀರಿಗೆ ಬೆರೆತ ರಾಸಾಯನಿಕ ಪದಾರ್ಥ:ನೂರಾರು ಜಲಚರಗಳ ಮಾರಣಹೋಮ

ರಾಜ್ಯಪಾಲ ಗೆಹ್ಲೋಟ್ ಕಾರು ಚಾಲಕ ಹೃದಯಾಘಾತದಿಂದ ಸಾವು