ಕ್ರೈಂಬೆಂಗಳೂರುರಾಜ್ಯ

ಗೆಳತಿಯನ್ನು ಪಾಪಿಯಿಂದ ರಕ್ಷಿಸಲು ಹೋಗಿ ಅನ್ಯಾಯವಾಗಿ ಜೀವ ಕಳೆದಕೊಂಡ ಯುವತಿ..! ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿದಾತ ಪೊಲೀಸ್‌ ಬಲೆಗೆ ಬಿದ್ದಿದ್ದೇಗೆ..?

ನ್ಯೂಸ್‌ ನಾಟೌಟ್‌: ಬೆಂಗಳೂರಿನ ಕೋರಮಂಗಲ ಪಿಜಿಯೊಂದರಲ್ಲಿ ನಡೆದ ಕೃತಿ ಕುಮಾರಿ ಎಂಬ ಯುವತಿಯ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಬೆಂಗಳೂರಲ್ಲಿ ಯಶಸ್ವಿಯಾಗಿದ್ದಾರೆ. ಕೃತ್ಯವೆಸಗಿದ ಆರೋಪಿ ಅಭಿಷೇಕ್‌ನನ್ನು ಮಧ್ಯಪ್ರದೇಶದಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತರಲಾಗಿದೆ.

ಮಧ್ಯಪ್ರದೇಶಕ್ಕೆ ತೆರಳಿದ್ದ ಬೆಂಗಳೂರು ಪೊಲೀಸರು, ಅಲ್ಲಿನ ಭೋಪಾಲ್‌ನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಸ್ಥಳೀಯ ಕೋರ್ಟ್‌ಗೆ ಹಾಜರುಪಡಿಸಿ, ಟ್ರಾನ್ಸಿಟ್ ವಾರೆಂಟ್ ಮೇಲೆ ಬೆಂಗಳೂರಿಗೆ ಕರೆ ತಂದಿದ್ದಾರೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ರಾಜಧಾನಿಯ ಕೋರಮಂಗಲದ ಪಿಜಿಯಲ್ಲಿ ಕೃತಿ ಕುಮಾರಿ ಎಂಬಾಕೆಯನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಈ ಘಟನೆಯ ತನಿಖೆ ನಡೆಸುವ ಅಧಿಕಾರಿಗಳಿಗೆ ಬೆಚ್ಚಿ ಬೀಳಿಸುವ ಇನ್ನಷ್ಟು ವಿವರಗಳು ಹೊರಬಿದ್ದಿವೆ. ಕೊಲೆಯಾಗಿ ಹೋದವಳು ಈತನ ಪ್ರೇಯಸಿಯ (lover) ಗೆಳತಿಯಾಗಿದ್ದು, ಈ ದುಷ್ಟನ ಕೈಯಿಂದ ಗೆಳತಿಯನ್ನು ಬಿಡಿಸುವ ಯತ್ನದಲ್ಲಿ ತಾನೇ ಕೊಲೆಗಿದ್ದಾಳೆ ಎಂದು ತಿಳಿದುಬಂದಿದೆ.

Related posts

ಬಂಟ್ವಾಳದಲ್ಲಿ ನಕಲಿ ಕರೆನ್ಸಿ ನೋಟು ಪತ್ತೆ..! ಕಾಸರಗೋಡಿನ ಇಬ್ಬರ ಬಂಧನ..!

ಬದುಕಿರುವಾಗಲೇ ಅಜ್ಜಿಗೆ ಡೆತ್ ಸರ್ಟಿಫಿಕೇಟ್ ಕೊಟ್ಟ ಅಧಿಕಾರಿಗಳು! ತಹಶಿಲ್ದಾರ್ ಬಗ್ಗೆ ಜನರು ಹೇಳೋದೇನು?

ಉಡುಪಿಯಲ್ಲಿ ನಾಲ್ವರ ಭೀಕರ ಕಗ್ಗೊಲೆ ಪ್ರಕರಣ:ವೃತ್ತಿ ತರಬೇತಿಯನ್ನೇ ಪ್ರಯೋಗಿಸಿದ್ದ ಪಾಪಿ ಹಂತಕ..!