Latestಕ್ರೈಂದೇಶ-ವಿದೇಶವೈರಲ್ ನ್ಯೂಸ್

ಬಾಂಗ್ಲಾ ಅಕ್ರಮ ವಲಸಿಗರ ವಿರುದ್ಧ ಬೃಹತ್‌ ಬುಲ್ಡೋಜರ್ ಕಾರ್ಯಾಚರಣೆ..! 74 ಬುಲ್ಡೋಜರ್, 200 ಟ್ರಕ್, 1800 ಕಾರ್ಮಿಕರು, 3000 ಪೊಲೀಸರು..!

544

ನ್ಯೂಸ್ ನಾಟೌಟ್ : ಪಹಲ್ಗಾಮ್‌ ಉಗ್ರರ ದಾಳಿ ಬೆನ್ನಲ್ಲೇ ಗುಜರಾತ್‌ ನಲ್ಲಿ ಅಕ್ರಮ ವಲಸಿಗರ ವಿರುದ್ಧ ಬೃಹತ್‌ ಬುಲ್ಡೋಜರ್ ಕಾರ್ಯಾಚರಣೆ ನಡೆಸಲಾಗಿದೆ.

ದೇಶದಲ್ಲೇ ನಡೆದ ಅತಿ ದೊಡ್ಡ ಅಕ್ರಮ ವಲಸಿಗರ ಬುಲ್ಡೋಜರ್‌ ಕಾರ್ಯಾಚರಣೆ ಇದಾಗಿದೆ. ಅದಕ್ಕಾಗಿ 74 ಬುಲ್ಡೋಜರ್‌ ಗಳು, 200 ಟ್ರಕ್‌ ಗಳು, 1,800 ಕಾರ್ಮಿಕರು, 3000 ಪೊಲೀಸ್‌ ಅಧಿಕಾರಿಗಳು ಆಪರೇಷನ್‌ ನ ಭಾಗವಾಗಿದ್ದರು. ಈ ಕಾರ್ಯಾಚರಣೆಯಲ್ಲಿ ಬಾಂಗ್ಲಾ ಅಕ್ರಮ ವಲಸಿಗರ ಮನೆಗಳನ್ನು ತೆರವು ಮಾಡಿಸಿದ್ದಾರೆ.

ಚಂಡೋಲಾ ಸರೋವರವು ಅಹಮದಾಬಾದ್‌ ನಲ್ಲಿ ಅತಿ ಹೆಚ್ಚು ಬಾಂಗ್ಲಾದೇಶದ ಒಳನುಸುಳುವವರನ್ನು ಹೊಂದಿದೆ ಎಂದು ಹೇಳಲಾಗುತ್ತದೆ. ಈ ಪ್ರದೇಶದಿಂದ 800 ಕ್ಕೂ ಹೆಚ್ಚು ಅಕ್ರಮ ವಲಸಿಗರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ‌

ಕಾರ್ಯಾಚರಣೆ ಸಂಬಂಧ ತುರ್ತು ವಿಚಾರಣೆ ನಡೆಸಬೇಕು ಎಂದು 18 ಅರ್ಜಿದಾರರು ಗುಜರಾತ್‌ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಹಲವರು ನಿವಾಸಿಗಳು ಬಾಂಗ್ಲಾದೇಶಿಗಳಲ್ಲ. ಅವರ ಮನೆಗಳನ್ನು ತಪ್ಪಾಗಿ ನೆಲಸಮ ಮಾಡಲಾಗುತ್ತಿದೆ ಎಂದು ಅರ್ಜಿದಾರರು ತಿಳಿಸಿದ್ದಾರೆ. ಯಾರೊಬ್ಬರ ವಿದೇಶಿ ಸ್ಥಾನಮಾನವನ್ನು ನಿರ್ಧರಿಸುವುದು ವಿದೇಶಿಯರ ನ್ಯಾಯಮಂಡಳಿಯ ವ್ಯಾಪ್ತಿಗೆ ಬರುತ್ತದೆ. ಆದ್ದರಿಂದ, ಸರಿಯಾದ ಕಾನೂನು ಆಧಾರವಿಲ್ಲದೆ ಮನೆಗಳನ್ನು ನೆಲಸಮಗೊಳಿಸುವುದನ್ನು ಸಮರ್ಥಿಸಲಾಗುವುದಿಲ್ಲ ಎಂದು ಕೋರ್ಟ್ ಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಅಮೆರಿಕದ ದೇಗುಲದಲ್ಲಿ ಮೋದಿ ಹೆಸರಲ್ಲಿ ಪೂಜೆ ಮಾಡಿಸಿದ ಅಣ್ಣಾಮಲೈ..! ಅಮೆರಿಕದಲ್ಲಿರುವ ಉಡುಪಿಯ ಶ್ರೀ ಪುತ್ತಿಗೆ ಮಠದ ಶ್ರೀ ಕೃಷ್ಣ ಮಂದಿರಕ್ಕೆ ಭೇಟಿ..!

See also  ಮಹಿಳಾ ವಕೀಲರು ಬುರ್ಖಾ ಧರಿಸಿ ವಾದ ಮಾಡುವಂತಿಲ್ಲ ಎಂದು ಆದೇಶಿಸಿದ ಹೈಕೋರ್ಟ್, ಬುರ್ಖಾ ತೆಗೆಯಲು ನಿರಾಕರಿಸಿದ ವಕೀಲೆ..!
  Ad Widget   Ad Widget   Ad Widget   Ad Widget