ಕ್ರೈಂ

ನಾಪತ್ತೆಯಾಗಿದ್ದ ನಟಿಯ ಶವ ಗೋಣಿ ಚೀಲದೊಳಗೆ ಪತ್ತೆ

384
Spread the love

ಢಾಕಾ: ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ನಟಿ ರೈಮಾ ಇಸ್ಲಾಂ ಶಿಮು ಢಾಕಾದ ಹೊರವಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆಕೆಯ ಶವ ಕೆರಣಿಗಂಜ್ ನ ಹಜರತ್‌ಪುರ ಸೇತುವೆಯ ಬಳಿ ಗೋಣಿಚೀಲದಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿಮು ನಾಪತ್ತೆಯಾದ ಹಿನ್ನೆಲೆಯಲ್ಲಿ ಅವರ ಸಂಬಂಧಿಕರು ಭಾನುವಾರ ಕಲಬಾಗನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸ್ಥಳೀಯರು ಮಾಹಿತಿ ನೀಡಿದ ನಂತರ ಕೆರಣಿಗಂಜ್ ಮಾದರಿ ಠಾಣೆಯ ಪೊಲೀಸರ ತಂಡ ಮೃತದೇಹವನ್ನು ಹೊರತೆಗೆದಿದೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ ಸಲೀಮುಲ್ಲಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

45 ವರ್ಷದ ನಟಿ 1998 ರಲ್ಲಿ ‘ಬರ್ತಮನ್’ ಚಿತ್ರದ ಮೂಲಕ ಪದಾರ್ಪಣೆ ಮಾಡಿದರು. ನಂತರ ಅವರು 25 ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಅವರು ಬಾಂಗ್ಲಾದೇಶ ಚಲನಚಿತ್ರ ಕಲಾವಿದರ ಸಂಘದ ಸಹಾಯಕ ಸದಸ್ಯರಾಗಿದ್ದರು. ಚಲನಚಿತ್ರಗಳ ಜೊತೆಗೆ, ಅವರು ಕಿರುತೆರೆ ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಕೆಲವು ನಾಟಕ ನಿರ್ಮಾಣ ಮಾಡಿದ್ದಾರೆ.

See also  9 ವರ್ಷದ ಬಾಲಕಿಯನ್ನು ಬಾವಿಗೆ ತಳ್ಳಿ, ಕಲ್ಲೆಸೆದು ಕೊಲೆ..! ರಾತ್ರೋರಾತ್ರಿ ದ್ವೇಷ ಸಾಧಿಸಿದ್ದ ಕಿರಾತಕ..!
  Ad Widget   Ad Widget   Ad Widget   Ad Widget   Ad Widget   Ad Widget